32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತತಾಲೂಕು ಸುದ್ದಿವರದಿ

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

ಬೆಳ್ತಂಗಡಿ: ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಸಮೀಪ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕನಿಗೆ ಗಂಭೀರ ಗಾಯಗೊಂಡ ಘಟನೆ ಡಿ.24ರಂದು ಸಂಜೆ ನಡೆದಿರುತ್ತದೆ.

ಕೊಯ್ಯೂರು ಗ್ರಾಮದ ಆದೂರು ಪೆರಾಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಮೇಶ್ ಅವರು ಶಾಲೆ ಬಿಟ್ಟು ಮನೆಗೆ ತೆರಳುವ ಸಮಯದಲ್ಲಿ ಸರಕಾರಿ ಫ್ರೌಡ ಶಾಲಾ ಸಮೀಪ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದಿರುವ ಸ್ಥಳೀಯ ಯುವಕ ಸಂದೀಪ್ ಹಿಂದಿನಿಂದ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕ ರಮೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಬಲಗೈಯ ಭುಜಕ್ಕೆ ಗಂಭೀರ ಗಾಯಹೊಂದಿರುತ್ತದೆ. ತಕ್ಷಣ ಸ್ಥಳೀಯರು ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳ್ತಂಗಡಿ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು.

Related posts

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!