ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ನಡೆಯಲಿದ್ದು ಊರ ಭಕ್ತಾಭಿಮಾನಿಗಳಿಂದ ಶ್ರೀಕ್ಷೇತ್ರಕ್ಕೆ ಬೆಳಾಲು ಪೇಟೆಯಿಂದ ಭವ್ಯಮೆರವಣಿಗೆಯೊಂದಿಗೆ ಸಾಗಿ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.

ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿದ ಅಕ್ಷೋಭ್ಯ ಅನ್ನಛತ್ರವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಇದರ ಧರ್ಮದರ್ಶಿಗಳಾದ ಹರೀಶ್ ಗೌಡ ಆರಿಕೋಡಿ ಉದ್ಘಾಟಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಮಮತಾ ದಿನೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ, ಮಾಜಿ ಮಂಡಲ ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ಮಾಜಿ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಮತ್ತು ಭಗವಧ್ಭಕ್ತರು ಉಪಸ್ಥಿತರಿದ್ದರು.

Related posts

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya
error: Content is protected !!