September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ. 23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಕ್ರಿಸ್ಮಸ್ ಹಬ್ಬವು ಪ್ರೀತಿ, ಶಾಂತಿ ಮತ್ತು ಸಂತೋಷದ ಸಂಕೇತವಾಗಿದೆ ಎಂದು ಹೇಳಿ, ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಕೋರಿದರು.

ಮುಖ್ಯ ಅತಿಥಿಗಳಾಗಿ ವಂ|ಸ್ವಾ|ಲ್ಯಾನ್ಸಿ ನೋಯಲ್ ರೆಬೆಲ್ಲೋ ಮಾತನಾಡಿ, ನಾವು ನಮ್ಮ ಹೆತ್ತವರೊಂದಿಗೆ ಶಿಕ್ಷಕರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಬೇಕು ಆಗ ನಾವು ನಮ್ಮ ಜೀವನದಲ್ಲಿ ಬದಲಾವಣೆಯನ್ನು ಕಾಣುತ್ತೇವೆ. ನಮ್ಮ ಜೀವನದಲ್ಲಿ ಹೆತ್ತವರನ್ನು ,ಶಿಕ್ಷಕರನ್ನು ಗೌರವಿಸಬೇಕು ಎಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ , ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ , ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಲಿಯೋ ನೊರೊನ್ಹ , ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ , ಸೇಕ್ರೆಡ್ ಹಾರ್ಟ್ ಕಾನ್ವೆಂಟಿನ ಸಿ| ಅನಿತಾ ಫೆರ್ನಾಂಡಿಸ್ ಮತ್ತು ಸಿ| ಅಂಜಲಿಯಾ ಫೆರ್ನಾಂಡಿಸ್ , ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ನಿರೂಪಿಸಿ, ವಿದ್ಯಾರ್ಥಿನಿಯಾದ ಮನ್ವಿತಾ ನಾಯಕ್ ಸ್ವಾಗತಿಸಿ, ಹವನ ಪ್ರಭು ಧನ್ಯವಾದವನ್ನು ಸಮರ್ಪಿಸಿದರು.

Related posts

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಪಿಲ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬರಾಯಕೆರೆಗೆ ಹಾನಿ : ಅಳದಂಗಡಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ: ಸ್ಥಳ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
error: Content is protected !!