23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಅಂಗವಾಗಿ ಧಾರ್ಮಿಕ ಸಭೆಯು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನ ಬೈಲುವಾರಿನ ಹಿರಿಯ ಸದಸ್ಯರಾದ ರಾಮಣ್ಣ ಗೌಡ ವಚ್ಚ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಶ್ರೀಮತಿ ರೋಹಿಣಿ ಶ್ರೀಪಾದ, ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಹರೀಶ್ ಗೌಡ ಆರಿಕೋಡಿ, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಶ್ರೀಮತಿ ಹೇಮಾವತಿ ಬಿ ಜೀವಂಧರ್ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿಯ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಉಪಾಧ್ಯಕ್ಷೆ ಶ್ರೀಮತಿ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಪೂಜಾರಿ ಪೋಸೊಟ್ಟು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಸದಸ್ಯರು, ಜಾತ್ರೋತ್ಸವ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಊರ ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ಶ್ರೀಮತಿ ರೋಹಿಣಿ ಶ್ರೀಪಾದ ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಹರೀಶ್ ಗೌಡ ಆರಿಕೋಡಿ, ಕಿರಣ್ ಚಂದ್ರ ಡಿ ಪುಷ್ಪಗಿರಿ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್. ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮನಶ್ರೀ ಸೀತಾರಾಮ್ ಬೆಳಾಲು ಇವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ವೇಳೆ ಉಜಿರೆ ದೇವಸ್ಥಾನ ಆಡಳಿತ ಮೊಕ್ತೇಸರರು ಪಡ್ವೆಟ್ನಾಯರು ಮತ್ತು ಶಾಸಕ ಹರೀಶ್ ಪೂಂಜಾರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya
error: Content is protected !!