ಉಜಿರೆ: ಎಸ್‌ಡಿಎಂಇ ಸೊಸೈಟಿಯ ಉಪಾಧ್ಯಕ್ಷರು, ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು ಹಾಗೂ ಎಸ್‌ಡಿಎಂ ಎಜ್ಯುಕೇಶನಲ್ ಸೊಸೈಟಿ (ಆರ್), ಉಜಿರೆಯ ಕಾರ್ಯದರ್ಶಿಯಾಗಿದ್ದ ಪ್ರೊ. ಎಸ್. ಪ್ರಭಾಕರ್ ಅವರು ಡಿ.24 ರಂದು ನಿಧನರಾದರು. ಅವರ ನಿಧನದ ಹಿನ್ನೆಲೆಯಲ್ಲಿ ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ಕಾಲೇಜಿನ ಪ್ರಾಂಶುಪಾಲರು, ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಪ್ರೊ. ಎಸ್. ಪ್ರಭಾಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿ, ಅವರ ಅಗಲಿಕೆ ಸಂಸ್ಥೆಗೆ ಹಾಗೂ ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಸಭೆಯಲ್ಲಿ ಶೋಕ ವ್ಯಕ್ತಪಡಿಸಲಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು











