ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವ್ಯುತ್ಪತ್ತಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶೈಕ್ಷಣಿಕ ಅನುಭವ ನೀಡುವ ಉದ್ದೇಶದಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. 

ಗ್ರಾಮೀಣ ಆಡಳಿತ ವ್ಯವಸ್ಥೆ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಕಾರ್ಯಪದ್ಧತಿ ಹಾಗೂ ವಿವಿಧ ಜನಕಲ್ಯಾಣ ಯೋಜನೆಗಳ ಜಾರಿಗೆ ಸಂಬಂಧಿಸಿದ ಕ್ಷೇತ್ರಮಟ್ಟದ ಅಧ್ಯಯನಕ್ಕೆ ಈ ಭೇಟಿ ಅನುವು ಮಾಡಿಕೊಟ್ಟಿತು.  ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಹಾಗೂ ವ್ಯುತ್ಪತ್ತಿ ಸಂಘದ ಉಪನ್ಯಾಸಕರ ಮಾರ್ಗದರ್ಶನದೊಂದಿಗೆ  ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಅಲ್ಲಿನ ದಿನನಿತ್ಯದ ಆಡಳಿತ ಕಾರ್ಯವೈಖರಿಯನ್ನು ತಿಳಿದುಕೊಂಡರು.

ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್‌ನ ಕಾರ್ಯವೈಖರಿ, ಘನತ್ಯಾಜ್ಯ ವಿಲೇವಾರಿ ಘಟಕ , ಅತ್ತಾಜೆ ಕೆರೆ , ಮಲತ್ಯಾಜ್ಯನಿರ್ವಹಣೆ ಹಾಗೂ ಜೈವಿಕಗೊಬ್ಬರ ತಯಾರಿ ಘಟಕ,ಅರಿವು ಡಿಜಿಟಲ್ ಗ್ರಂಥಾಲಯ ಮತ್ತು  ಕೂಸಿನ ಮನೆ ಮುಂತಾದ ವಿನೂತನ ಯೋಜನೆಗಳ ಯಶಸ್ವೀ ಕಾರ್ಯ ನಿರ್ವಹಣೆ ಕುರಿತು ಸಂಕ್ಷಿಪ್ತ ಮಾಹಿತಿ ಹಂಚಿಕೊಂಡರು.

ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷೆ ಉಷಾಕಿರಣ ಕಾರಂತ್ ಪಂಚಾಯತ್ ವ್ಯಾಪ್ತಿಯ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ, ಸ್ವಚ್ಛ ಭಾರತ ಮಿಷನ್, ಜಲ ಸಂರಕ್ಷಣೆ, ಗೃಹ ನಿರ್ಮಾಣ ಯೋಜನೆ, ಸಾನಿಟೇಷನ್,  ಮುಂತಾದ ಹಲವು ಸರ್ಕಾರಿ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಹೇಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂಬುದನ್ನು ವಿವರವಾಗಿ ಪರಿಚಯಿಸಿದರು. ವಿದ್ಯಾರ್ಥಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರೊಂದಿಗೆ ಸಂವಾದ ನಡೆಸಿ, ಯುವಕರ ಪಾತ್ರ, ಮತದಾರರ ಜಾಗೃತಿ, ಸುಸ್ಥಿರ ಅಭಿವೃದ್ಧಿ ಮತ್ತು ಗ್ರಾಮೀಣ ಸ್ವಚ್ಛತೆ ಕುರಿತಂತೆ ಅನೇಕ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದರು.

ಮತದಾರರ ಜಾಗೃತಿ, ಸುಸ್ಥಿರ ಅಭಿವೃದ್ಧಿ ಮತ್ತು ಗ್ರಾಮೀಣ ಸ್ವಚ್ಛತೆ ಕುರಿತಂತೆ ಅನೇಕ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದರು.ಸ್ಥಳೀಯ ಆಡಳಿತ ವ್ಯವಸ್ಥೆಯ ಪಾರದರ್ಶಕತೆ, ಹೊಣೆಗಾರಿಕೆ, ಮತ್ತು ಜನಸಹಭಾಗಿತ್ವವು ಪ್ರಜಾಪ್ರಭುತ್ವದ ಬಲವರ್ಧನೆಗೆ ಹೇಗೆ ಸಹಕರಿಸುತ್ತದೆ ಎಂಬ ಅರಿವು ವಿದ್ಯಾರ್ಥಿಗಳಲ್ಲಿ ಮೂಡಿದುದಾಗಿ ಉಪನ್ಯಾಸಕರು ಅಭಿಪ್ರಾಯಪಟ್ಟರು. ಈ ಶೈಕ್ಷಣಿಕ ಭೇಟಿ ಕಾರ್ಯಕ್ರಮವನ್ನು ವ್ಯುತ್ಪತ್ತಿ ಸಂಘದ ಸಂಯೋಜಕರಾದ ಶ್ರೀಮತಿ ದಿವ್ಯಾ ಕುಮಾರಿ, ಡಾ.ಸಾಜಿದಾ ಹಾಗೂ ಶ್ಯಾಮಿಲಾ ಸಂಯೋಜಿಸಿದರು. ಕಾಲೇಜಿನ ಗ್ರಂಥಪಾಲಕ ಮನೋಹರ್ ಶೆಟ್ಟಿ ಪಂಚಾಯತ್ ಸಿಬ್ಬಂದಿಗಳಾದ ನಾಗೇಶ್ ಹಾಗೂ ಉಮೇಶ್ ಸಹಕರಿಸಿದರು.ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು ಉಪಸ್ಥಿತರಿದ್ದರು.

Related posts

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!