September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ಸಲ್ಲಿಸಿದ ವರದಿಯ ಆದೇಶ ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಇಂದು ಮತ್ತೆ ನ್ಯಾಯಾಲಯ ಆದೇಶವನ್ನು ಡಿ.29ಕ್ಕೆ ಮುಂದೂಡಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ವರದಿಯನ್ನು (u/s)215 ಅಡಿಯಲ್ಲಿ ಸಲ್ಲಿಸಿದ್ದು,
ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಡಿ.26 ರಂದು ಆದೇಶ ನಿಗದಿಪಡಿಸಿದ್ದರು. ಆದ್ರೆ ಡಿ.26 ರಂದು ಮತ್ತೆ ಡಿ.29 ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಉಜಿರೆಯ ಗಣೇಶ್ ಶೆಟ್ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಇಬ್ಬರ ಮೊಬೈಲ್ ಎಸ್ಐಟಿ ವಶಕ್ಕೆ ಪಡೆದುಕೊಂಡಿತ್ತು. ಈ ಇಬ್ಬರ ಮೊಬೈಲ್ ಬಿಡುಗಡೆ ಮಾಡಿಸಲು ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಡಿ.24 ರಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಅರ್ಜಿಯ ಆದೇಶವನ್ನು ಡಿ.29 ಕ್ಕೆ ಮುಂದೂಡಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Related posts

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!