22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

ಉಜಿರೆ, : ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಆಫ್ ನೆಕರ್ನಾಟಕ ಮತ್ತು GAT ಕ್ಯಾಂಪಸ್ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಆರನೇ ಆವೃತ್ತಿಯ ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳ ತಂಡವು ಪುರುಷರ ವಿಭಾಗ ಮತ್ತು ಮಹಿಳಾ ವಿಭಾಗದಲ್ಲೂ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಪಂದ್ಯಾಟದಲ್ಲಿ ಮೊದಲ ಬಾರಿ ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ್ದಾರೆ.

ಫೈನಲ್ ಹಂತದ ಮಹಿಳೆಯರ ನೆಟ್ ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬೆಂಗಳೂರು ಸಿಟಿ ತಂಡವನ್ನು ಮಣಿಸುವ ಮೂಲಕ ಪ್ರಥಮ ಸ್ಥಾನವನ್ನು ಪಡೆಯಿತು. ಜಿಲ್ಲೆಯನ್ನು ಪ್ರತಿನಿಧಿಸಿದ ಮಹಿಳಾ ತಂಡದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ 10 ಜನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ವರ್ಷಿತ, ರಶ್ಮಿ , ಸುರಕ್ಷಾ , ಪಲ್ಲವಿ , ಧನುಶ್ರೀ , ಸಹನಾ , ಭೂಮಿಕಾ, ಪೂಜಾ , ಸಿಂಚನ , ನಮಿತಾ ಭಾಗವಹಿಸಿದ್ದರು.

ಪುರುಷ ವಿಭಾಗದ ಫೈನಲ್ ಪಂದ್ಯಾಟಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಏಳು ಜನ ವಿದ್ಯಾರ್ಥಿಗಳನ್ನು ಹೊಂದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಹಾಸನ ಜಿಲ್ಲೆಯನ್ನು ಎದುರಿಸಿ ದ್ವಿತೀಯ ಸ್ಥಾನವನ್ನು ಪಡೆಯಿತು. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ಮಣಿಕಂಠ, ಗಣೇಶ , ಮನೋಜ , ಪ್ರವೀಣ್, ಕೀರ್ತನ್, ಶಯಾನ್ ಮತ್ತು ರಾಹುಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಪ್ರಶಸ್ತಿ ವಿಜೇತ ಮಹಿಳಾ ಹಾಗು ಪುರುಷರ‌ ನೆಟ್ ಬಾಲ್ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya
error: Content is protected !!