23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

ಉಜಿರೆ: ಎಸ್‌ಡಿಎಂಇ ಸೊಸೈಟಿಯ ಉಪಾಧ್ಯಕ್ಷರು, ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು ಹಾಗೂ ಎಸ್‌ಡಿಎಂ ಎಜ್ಯುಕೇಶನಲ್ ಸೊಸೈಟಿ (ಆರ್), ಉಜಿರೆಯ ಕಾರ್ಯದರ್ಶಿಯಾಗಿದ್ದ ಪ್ರೊ. ಎಸ್. ಪ್ರಭಾಕರ್ ಅವರು ಡಿ.24 ರಂದು ನಿಧನರಾದರು. ಅವರ ನಿಧನದ ಹಿನ್ನೆಲೆಯಲ್ಲಿ ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಕಾಲೇಜಿನ ಪ್ರಾಂಶುಪಾಲರು, ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಪ್ರೊ. ಎಸ್. ಪ್ರಭಾಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿ, ಅವರ ಅಗಲಿಕೆ ಸಂಸ್ಥೆಗೆ ಹಾಗೂ ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಸಭೆಯಲ್ಲಿ ಶೋಕ ವ್ಯಕ್ತಪಡಿಸಲಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು

Related posts

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya
error: Content is protected !!