March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್ ಫೆಸ್ಟ್ 2025” ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿಗಳು ವಿವಿಧ ಕಾರ್ಯ ಯೋಜನೆಗಳನ್ನು ತಾವೇ ತಯಾರಿಸಿ ಪ್ರದರ್ಶನ ಏರ್ಪಡಿಸಿದ್ದರು.

ಉಜಿರೆ ಎಸ್.ಡಿ.ಎಮ್ ತಂತ್ರಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹಾಗೂ ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶ್ರೀ ಅಮರೇಶ ಹೆಬ್ಬಾರ್.ಎ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ಕಾರ್ಯ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಸಿದರು.

ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶಿವರಾಜ್ ಹಾಗೂ ಚಿತ್ರದುರ್ಗ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಸುನಿಲ್ ಪಿ.ಜೆ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿ ತೀರ್ಪು ನೀಡಿದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
error: Content is protected !!