September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

ತೆಂಕಕಾರಂದೂರು ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಡಿ.26 ರಂದು ಮಡಂತ್ಯಾರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗೊನೆ ಮುಹೂರ್ತ, ಸ್ವಸ್ತಿ ಪುಣ್ಯಾಹವಾಚನ, ಶ್ರೀ ಗಣಪತಿ ಹವನ, ಪಂಚವಿಂಶತಿ ಕಳಶ ಪೂಜೆ, ಸಹಸ್ರನಾಮಾರ್ಚನೆ ಸಹಿತ ಹಾಲು ಪಾಯಸ ಸೇವೆ, ನಾಗತಂಬಿಲ, ಪ್ರಧಾನ ಹೋಮ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಗಣಪತಿ ಹಾಗೂ ದುರ್ಗೆ ಕಳಸ ಅಭಿಷೇಕ, ದೈವಗಳ ಕಲಶಾಭಿಷೇಕ, ಪಂಚಪರ್ವ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ದೇವರಿಗೆ ಮಹಾ ರಂಗಪೂಜೆ, ದೈವಗಳಿಗೆ ಪರ್ವ ಸೇವೆ, ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣದ ಪ್ರಸಾದ ವಿತರಣೆ ನಡೆದು ಜಾತ್ರೋತ್ಸವವು ಸಂಪನ್ನಗೊಂಡಿತು..

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ಮಕ್ಕಳ ಕುಣಿತ ಭಜನಾ ತಂಡ ಹಾಗೂ ಮಲ್ಲಿಪ್ಪಾಡಿ ಶ್ರೀ ಸದಾಶಿವೇಶ್ವರ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಯೋಗೇಶ್ ಕುಮಾರ್ ಕೆ.ಎಸ್, ಅನುವಂಶಿಕ ಆಡಳಿತ ಮೋಕ್ತೆಸರರಾದ ಸುಬ್ರಹ್ಮಣ್ಯ ನೂರಿತ್ತಾಯ, ಅರ್ಚಕರಾದ ರಂಗನಾಥ ನೂರಿತ್ತಾಯ, ರತ್ನಾಕರ ನೂರಿತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಪದ್ಮ ನಾಯ್ಕ ಖಂಡಿಗ, ಕಾರ್ಯದರ್ಶಿ ಮೋಹನ್ ಪೂಜಾರಿ ಅಶ್ವಥ ಪಳಿಕೆ, ಕೋಶಾಧಿಕಾರಿ ಸೌಮ್ಯ ಮೋಹನ್ ಬಂಗೇರ, ಹಾಗೂ ಜಾತ್ರೊತ್ಸವ ಸಮಿತಿಯ ಮಾಜಿ ಅಧ್ಯಕ್ಷರುಗಳು ,ಪದಾಧಿಕಾರಿಗಳು, ಸೇವಾ ಸಮಿತಿ ಸಮಿತಿಯ ಸರ್ವ ಸದಸ್ಯರು ಊರಿನ ಭಗವದ್ ಭಕ್ತರು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya
error: Content is protected !!