38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2024-25 ನೇ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿವೇತನ ಬಿಡುಗಡೆ ಆಗಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಹನ್ನೆರಡು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆದಿದ್ದಾರೆ.

ವಿದ್ಯಾರ್ಥಿಗಳಾದ ಸಾತ್ವಿಕ್ .ಪಿ. , ದೀಪ್ತಿ ಮುರಾರಿ ಭಟ್ , ಶ್ರೀನಿಧಿ ವಿ. ಶ್ರೀಧರ್ , ಕೆ. ಕ್ಷಮಾ , ಮಿಹಿರ್ ಕೇಳ್ಕರ್ , ಪ್ರಾಂಜಲಿ , ರಿತೇಶ್ ನಾಗರಾಜ್ ಪ್ರಭು , ಧೀಮಂತ್ ಮರಾಠೆ , ಅನನ್ಯ ಪಿ.ವಿ. , ನೀತಿ ಕೆ. ಪಿ. , ಸುಮೇಧಾ ಗಾಂವ್ಕರ್ , ಸಂಜನಾ ಡಿ.ಎಸ್. ಇವರಿಗೆ ತಲಾ ಆರು ಸಾವಿರ ರೂ.ಗಳಂತೆ ಒಟ್ಟು ಎಪ್ಪತ್ತೆರಡು ಸಾವಿರ ರೂ. ವಿದ್ಯಾರ್ಥಿವೇತನವು ಆವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ ಎಂದು ದೆಹಲಿಯ ಸೆಂಟ್ರಲ್ ಸಂಸ್ಕೃತ ಯೂನಿವರ್ಸಿಟಿಯಿಂದ ವರದಿ ಬಂದಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಪ್ರಾಚಾರ್ಯ ಪ್ರಮೋದ್ ಕುಮಾರ್ .ಬಿ. ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!