September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

ಬೆಳ್ತಂಗಡಿ: ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಆಯ್ಕೆಗಳನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ ಎಂ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ನಿಟ್ಟೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವೃತ್ತಿ ಮಾರ್ಗದರ್ಶನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ವೃತ್ತಿಪರ ಕೋರ್ಸುಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಉದ್ಯೋಗವನ್ನು ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ನಿಟ್ಟೆ ವಿಶ್ವವಿದ್ಯಾನಿಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪವನ್ ವರ್ಗೀಸ್ ಉಪಸ್ಥಿತರಿದ್ದರು. ‌ ನಿಟ್ಟೆ ವಿಶ್ವವಿದ್ಯಾಲಯದ ಸಹಾಯಕ ನಿರ್ದೇಶಕ ವಿವೇಕ್ ರಂಜನ್ ಭಂಡಾರಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು.
ಉಪನ್ಯಾಸಕ ಶಂಕರ್ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಮೀನಾಕ್ಷಿ ಧನ್ಯವಾದವಿತ್ತರು. ಉಪನ್ಯಾಸಕಿ ಅನುರಾಧ ಕೆ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!