25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯ ಕ್ಷೇತ್ರದ ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರಿಪಳ್ಳದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶಾಂಬ ಶೆಟ್ಟಿ ಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾಲೆಗೆ ಸಾಕಷ್ಟು ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರು ಅಬಿವೃದ್ದಿ ಹೊಂದುತ್ತಿರುವುದು ಸಂತಸದ ಸಂಗತಿಯಾಗಿದ್ದು ನಮ್ಮ ಊರಿನಲ್ಲಿ ಜ್ಞಾನ ವಿಕಾಸ ಕೇಂದ್ರಕ್ಕೆ ಅವಕಾಶ ಒದಗಿಸಿದಕ್ಕೆ ಸಂತಸ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಶಾಂತ್ ಇತ್ತೀಚಿನ ದಿನಗಳಲ್ಲಿ ನಡೆಯುವ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆರ್ಥಿಕ ಸಮಾಲೋಚಕಿಯಾದ ಉಷಾ ರವರು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷ ಗುರುರಾಜ್ ರವರು ಜ್ಞಾನ ವಿಕಾಸ ಕಾರ್ಯಕ್ರಮಕ್ಕೆ ಗುರಿಪಲ್ಲದಲ್ಲಿ ಅವಕಾಶ ದೊರೆತಿರುವುದು ತುಂಬಾ ಸಂತೋಷವಾಗಿದೆ ಜ್ಞಾನ ವಿಕಾಸ ಕೇಂದ್ರದಿಂದ ಮಹಿಳೆಯರು ಉತ್ತಮ ಮಾಹಿತಿಯೂoದಿಗೆ ಆತ್ಮಸ್ಥೈರ್ಯ ತುಂಬುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರು ಹಾಗೂ ಗುರಿಪಲ್ಲ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಸೌಮ್ಯ ಲತಾ ವಹಿಸಿದ್ದರು.

ಬೇಬಿ ಉಮೇಶ್ ಮತ್ತು ಸುಮಿತಾ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಮೇಲ್ವಿಚಾರಕರಾದ ಉಷಾ ರವರು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಪವಿತ್ರ ನಿರೂಪಿಸಿದ ಕಾರ್ಯಕ್ರಮದಲ್ಲಿ ಸಂಯೋಜಕಿ ಅನಿತಾ ಸ್ವಾಗತಿಸಿ ಮನಿಷಾ ಧನ್ಯವಾದ ನೀಡಿದರು. ಸೇವಾಪ್ರತಿನಿಧಿ ಪುಷ್ಪಾವತಿ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya
error: Content is protected !!