25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಮಂಗಳೂರಿನ ಕಾರ್‌ಸ್ಟ್ರೀಟ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ 14ನೇ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಡಿ.27 ರಂದು ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ನಡೆಯಿತು.

ಉಜಿರೆ ಗೌಡರ ಯಾನೆ ಒಕ್ಕಲಿಗರ ಸಂಘ ಗೌರವಾಧ್ಯಕ್ಷ ಗೋಪಾಲಕೃಷ್ಣ ಜಿ.ಕೆ, ಬಂಟರ ಸಂಘ ಉಜಿರೆ ಇದರ ನಿರ್ದೇಶಕರಾದ ವೆಂಕಟರಮಣ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಉಜಿರೆಯ ಬೆಳಾಲು ಕ್ರಾಸ್ ಹಾಗೂ ಕುವೆಂಪುನಗರ ಪರಿಸರಗಳಲ್ಲಿ ಸ್ವಯಂಸೇವಕರು ಶ್ರಮದಾನ ನಡೆಸಿ, ಪರಸರ ಸ್ವಚ್ಛತಾ ಕಾರ್ಯ ಮಾಡಿದರು.

ಉಜಿರೆ ಬಂಟರ ಸಂಘದ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಯೊಂದಿಗೆ ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಬ್ಯಾಂಕಿನ ಸಾಮಾಜಿಕ ಬದ್ಧತೆಗೆ ಹಿಡಿದ ಕೈಗನ್ನಡಿ ಎಂದು ಶ್ಲಾಘಿಸಿದರು. ನಂದಗೋಕುಲ ಗೋಶಾಲೆಯ ಅಧ್ಯಕ್ಷ ಡಾ. ಎಂ.ಎಂ ದಯಾಕರ್ ಮಾತನಾಡಿ, ಸ್ವಚ್ಛತೆಯ ಕಾರ್ಯವು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕು, ಮುಂದಿನ ಪೀಳಿಗೆಗೂ ಸ್ವಚ್ಛತೆಯ ಅರಿವು ಮೂಡಿಸಬೇಕಾದರೆ ಇಂಥಹ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಗಳು ಅಗತ್ಯ. ಈ ನಿಟ್ಟಿನಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಹಮ್ಮಿಕೊಂಡಿರುವ ಈ ಸ್ವಚ್ಛತಾ ಅಭಿಯಾನದ ಕೆಲಸ ಅತ್ಯುತ್ತಮವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬ್ಯಾಂಕಿನ ನಿರ್ದೇಶಕ ಡಿ.ಭಾಸ್ಕರ ಆಚಾರ್ಯ, ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಷಾ ಕಿರಣ್, ಉಪಾಧ್ಯಕ್ಷ ರವಿ ಮತ್ತು ಸದಸ್ಯರು, ಲಯನ್ಸ್ ಕ್ಲಬ್ ಉಜಿರೆ ಇದರ ಅಧ್ಯಕ್ಷ ಮುರಳಿ ಬಲಿಪ ಹಾಗೂ ಸದಸ್ಯರು, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಹಾಗೂ ಸದಸ್ಯರು, ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಮಹೇಶ್ ಪಾಟೀಲ್ ಮತ್ತು ವಿದ್ಯಾರ್ಥಿಗಳು, ಬ್ಯಾಂಕಿನ ಗ್ರಾಹಕರು, ಸದಸ್ಯರು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿ ವರ್ಗದವರು ಸ್ವಯಂಸೇವಕರಾಗಿ ಭಾಗವಹಿಸಿದ್ದರು.

Related posts

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!