37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29 ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳಸೂತ್ರ ಹಾಗೂ ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು ಹದಿಮೂರು ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು 2026ರ ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644,
ವಾಟ್ಸಪ್ ನಂ. 9663464648, 8147263422

Related posts

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!