ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ. 28 ರಂದು ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ದೇಶಭಕ್ತಿ ಗೀತೆ ಮತ್ತು ರಂಗೋಲಿಯಲ್ಲಿ ಪ್ರಥಮ, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಗುರುದೇವ ಎಜುಕೇಶನಲ್ ಟ್ರಸ್ಟ್ ಇದರ ಸಂಸ್ಥಾಪಕರು ಹಾಗೂ ಮಾಜಿ ಶಾಸಕರಾದ ದಿವಂಗತ ಕೆ. ವಸಂತ ಬಂಗೇರ ಅವರ 80 ನೇ ಹುಟ್ಟು ಹಬ್ಬದ ಸ್ಮರಣಾರ್ಥವಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.











