38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಸಿನಮಕ್ಕಿ ಹತ್ಯಡ್ಕ ಸಹಕಾರಿ ಸಂಘದ ಕಟ್ಟಡದಲ್ಲಿ ಡಿ.29ರಂದು ಉದ್ಘಾಟನೆಗೊಂಡಿತು.

ಕೇಂದ್ರದ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು ಉದ್ಯೋಗ ಖಾತೆಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜು ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ಅಗ್ರಿಲೀಫ್ ಸಂಸ್ಥೆಯ ಅವಿನಾಶ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಜನೌಷಧಿ ಕೇಂದ್ರದ ಮಾಲಕ ಶಿವರಂಜನ್, ನಿರ್ದೇಶಕರು, ಸಿಬ್ಬಂದಿ ವರ್ಗದವರು, ಸದಸ್ಯರು ಉಪಸ್ಥಿತರಿದ್ದರು.

ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ನಿರೂಪಿಸಿದರು.

Related posts

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
error: Content is protected !!