September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

ಮೇಲಂತಬೆಟ್ಟು: ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿ.27ರಂದು ಜರಗಿತು

ದಯಾನಂದ ರೈ ಇವರ ಘನ ಅಧ್ಯಕ್ಷತೆಯಲ್ಲಿ ಶ್ರೀ ಲಕ್ಷ್ಮೀ ಗ್ರೂಪ್ಸ್ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲೀಕ ಮೋಹನ್ ಕುಮಾರ್ ಉಜಿರೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಮುರಳಿ ಬಲಿಪ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ.ತ್ರಿಪಾತತ್ ಲಾಜಿಸ್ಟಿಕ್ಸ್ ಕಂಪನಿ ಬೆಂಗಳೂರು ನಿರ್ದೇಶಕ ಅಬ್ಬಾಸ್ ಖಾನ್ , ಕರ್ನಾಟಕ ಬ್ಯಾಂಕ್ ಮುಖ್ಯ ಶಾಖೆ ಅರಸೀಕೆರೆ ಸಹಾಯಕ ಪ್ರಬಂಧಕ ವೆಂಕಟೇಶ ಭಟ್ ಕೆ ಎನ್, ಧರ್ಮಸ್ಥಳ. ಎಸ್ ಕೆ ಡಿ ಆರ್ ಪಿ ನಿರ್ದೇಶಕ ಚಂದ್ರಶೇಖರ ಗೌಡ , ವೇಣೂರು ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಶ್ರೀಮತಿ ಸಂಧ್ಯಾ ಎಸ್ ಜೈನ್, ಸೌಮ್ಯ ಮಾಧವ ಗೌಡ ಎಣ್ಣಾಲು ಮನೆ ಪುತ್ತೂರು, ಹರೀಶ್ ಬಂಗೇರ ಅರುವದಕಲ ಸವಣಾಲು, ಕೃಷ್ಣಪ್ಪ ಗೌಡ ದೇವಸ ಮನೆ , ಪ್ರಗತಿಪರ ಕೃಷಿಕ ಸವಣಾಲು, ಅಬ್ಬಾಸ್ ಖಾನ್ ಇವರ ಮಾತೃಶ್ರೀಯವರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಭಂಡಾರಿ ಸ್ವಾಗತಿಸಿದರು. ಆಡಳಿತ ಸಮಿತಿಯ ಕಾರ್ಯದರ್ಶಿ ಕೂಸಪ್ಪ ವರದಿ ವಾಚಿಸಿದರು. ಗೌರವ ಶಿಕ್ಷಕಿ ಶ್ರೀಮತಿ ಮಮತಾ ಇವರು ಬಹುಮಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಶಿಕ್ಷಕ ಕೂಸಪ್ಪ ಧನ್ಯವಾದ ಸಮರ್ಪಿಸಿದರು. ಮುಖ್ಯ ಶಿಕ್ಷಕರು ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು , ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿಯ ಎಲ್ಲಾ ಪದಾಧಿಕಾರಿಗಳು , ಪೋಷಕರು ಅಕ್ಷರ ದಾಸೋಹ ಸಿಬ್ಬಂದಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.


ಬಳಿಕ ಅಂಗನವಾಡಿ ಪುಟಾಣಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು..

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!