22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಚೇರಿಯ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಮುಂಬಡ್ತಿಗೊಂಡು, ಮಂಗಳೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡ ಜಯರಾಮ್ ಎಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಡಿ.29 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ಅಧ್ಯಾಪಕ ಸಾಹಿತಿ ಅರವಿಂದ ಚೊಕ್ಕಾಡಿ ಅಭಿನಂದನಾ ಭಾಷಣ ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಮದ ನಿವೃತ್ತ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಪ್ರಸಾದ್ ಅಜಿಲ, ಬೆಳ್ತಂಗಡಿ ಪಿಡಬ್ಲ್ಯೂಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ, ಪಂಚಾಯತ್ ರಾಜ್ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಹೇಮಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಸುಂದರ ಪೂಜಾರಿ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕಿ ಸಫನಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಧಾಕರ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಡಿ ಬಳಂಜ, ಲೆಕ್ಕ ಸಹಾಯಕ ಗಣೇಶ್ ಪೂಜಾರಿ, ತಾಲೂಕು ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಧಾಕರ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಸತೀಶ್ ನಾರಾವಿ, ಅರಿವು ಕೇಂದ್ರಗಳ ಅಧಕ್ಷೆ ಗುಣಾವತಿ ಮಚ್ಚಿನ ಭಾವಿಸಿ, ಪದೋನ್ನತಿಗೊಂಡ ಜಯರಾಮ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಗಣೇಶ್ ಆರಂಬೋಡಿ ಸ್ವಾಗತಿಸಿ, ಮಿತ್ತಬಾಗಿಲು ಪಿಡಿಒ
ಮೋಹನ್ ಬಂಗೇರ ನಿರೂಪಿಸಿದರು. ಪಿಡಿಒ ಗಾಯತ್ರಿ ಸನ್ಮಾನ ಪತ್ರ ವಾಚಿಸಿದರು. ತಾಲೂಕು ಸಂಯೋಜಕ ಜಯಾನಂದ ಲಾಯಿಲ ವಂದಿಸಿದರು.

Related posts

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya
error: Content is protected !!