September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಸಂಸ್ಥಾಪಕ ಶ್ರೀ ಕೀರ್ತಿ ಶೇಷ ವಸಂತ ಬಂಗೇರರವರ 80ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗುರು ವಸಂತ ಎಂಬ ಹೆಸರಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ವಹಿಸಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಮ್ಮ ತಂದೆಯವರ 80ನೇ ಹುಟ್ಟುವ ಹಬ್ಬದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದೇವೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯನ್ನು ನಿರ್ಮಾಣ ಮಾಡಿಕೊಟ್ಟಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತಮ್ಮ ತಂದೆಯವರಾದ ಕೆ ವಸಂತ ಬಂಗೇರರ ರವರು ಶ್ರೀ ಗುರುದೇವ ಕಾಲೇಜಿನ, ಜಿಲ್ಲೆಯ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗಾಗಿ ಮತ್ತು ಯಾರು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕಾಲೇಜನ್ನು ಕಟ್ಟಿ ಬೆಳೆಸಿದ್ದಾರೆ, ಅವರು ಒಳ್ಳೆಯ ಉದ್ದೇಶದಿಂದ ಸ್ಥಾಪಿಸಿದ ಕಾಲೇಜು ಹೆಮ್ಮರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ತಾಲೂಕಿನ ಸುಮಾರು 24 ಪ್ರೌಢಶಾಲೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಬದಲಾಜೆ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಎಕ್ಸೆಲ್ ಟೆಕ್ನೋ ಪ್ರೌಢಶಾಲೆ ವೇಣೂರು ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದರು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು ಮತ್ತು ಭಾಗವಹಿಸಿದ ಎಲ್ಲಾ ಪ್ರೌಢಶಾಲೆಗಳಿಗೆ ಸ್ಮರಣಿಕೆಯನ್ನ ನೀಡಿ ಅಭಿನಂದಿಸಲಾಯಿತು, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಬಿಎ ಶಮಿಉಲ್ಲ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ಲೆಕ್ಕಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಸುಷ್ಮಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ವಂದಿಸಿದರು. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ರಾಕೇಶ್ ಕುಮಾರ್ ಇತಿಹಾಸ ಉಪನ್ಯಾಸಕರಾದ ಹರೀಶ್ ಪೂಜಾರಿ ಮತ್ತು ರಾಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಮತ್ತು ಭಾಗವಹಿಸಿದ ಎಲ್ಲ ಸ್ಪರ್ಧಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಗಣಿತಶಾಸ್ತ್ರ ಭಾಗದ ಉಪನ್ಯಾಸಕಿ ಶ್ರೀಮತಿ ಮಾಯಾ ಭಟ್ ಧನ್ಯವಾದ ನೀಡಿದರು.

Related posts

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya
error: Content is protected !!