March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಡಿ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಡಿ. ಅಬ್ದುಲ್ ರೆಹಮಾನ್ ಮಾತನಾಡಿ ಇಂದಿನ ಮಕ್ಕಳೇ ಮುಂದಿನ ಜನಾಂಗ, ದೇಶದ ಭವಿಷ್ಯ ಕಟ್ಟುವ ರೂವಾರಿಗಳು ವಿದ್ಯಾರ್ಥಿಗಳು ಹಾಗಾಗಿ ತಮ್ಮ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆಯನ್ನು ಬೋಧಿಸಿದರು. ವೇದಿಕೆಯಲ್ಲಿ ಯೋಜನೆಯ ಬೆಳಾಲು ವಲಯದ ಒಕ್ಕೂಟದ ಅಧ್ಯಕ್ಷ ರತ್ನಾಕರ ಆಚಾರ್ಯ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳಾದ ತಾರಾನಾಥ್, ಚೈತನ್ಯ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ, ಶಿಕ್ಷಕ ಕಿರಣ್ ವಂದಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಜಿರೆ ವಲಯ ಮೇಲ್ವಿಚಾರಕರಾದ ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya
error: Content is protected !!