September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಸುಲ್ಕೇರಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವು, ಶಾಲೆಯನ್ನು ದತ್ತು ಸ್ವೀಕರಿಸಿದ ಮತ್ತು ಶ್ರೀ ಸತ್ಯ ದೇವತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರು ಧ್ವಜಾರೋಹಣವನ್ನು ಮಾಡುವ ಮೂಲಕ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ವಾರ್ಷಿಕೋತ್ಸವವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆಗೈದರು. ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವು ನಡೆಯಿತು.

ಎಂ ಆರ್ ಪಿ ಎಲ್ ಸಂಸ್ಥೆಯಿಂದ ನಿರ್ಮಾಣಗೊಂಡ ಹುಡುಗರ ಶೌಚಾಲಯವನ್ನು ಶಿವಪ್ರಸಾದ ಅಜಿಲರು ಅಳದಂಗಡಿ ಉದ್ಘಾಟನೆಗೈದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಾರ್ಷಿಕೋತ್ಸವಕ್ಕೆ ಆಗಮಿಸಿ ಈ ವರ್ಷದಲ್ಲಿ ಕೆಪಿಎಸ್ ಶಾಲೆಯನ್ನಾಗಿ ಪರಿವರ್ತಿಸುವ ಭರವಸೆಯನ್ನು ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಆಚಾರ್ಯ, ಬೆಂಗಳೂರಿನ ಹೈಕೋರ್ಟ್ ನ ವಕೀಲ ಉಮೇಶ್ ಭಂಡಾರಿ, ಶಾಲಾ ನಾಯಕಿ ಕುಮಾರಿ ಸಿಂಚನ, ಶಿರ್ಲಾಲು ಕೃಷಿ ಪತ್ತಿನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಶಾಲಾ ಸುವರ್ಣ ಮಹೋತ್ಸವದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ನೊಚ್ಚ, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ವಸಂತ ರಾವ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಶಾಲಾ ನಿಕಟಪೂರ್ವ ಎಸ್ ಡಿ ಎಮ್ ಸಿ ಅಧ್ಯಕ್ಷ ಶ್ರೀನಿವಾಸ ರಾವ್ ದೋರಿಂಜ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಾಲೆಯ ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ರೂಪ , ಮುಖ್ಯ ಶಿಕ್ಷಕ ಸುರೇಶ್ ಎನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ,
ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ನಳಿನಿ, ಕಾರ್ಯದರ್ಶಿ ಹರೀಶ್ ಕುಲಾಲ್, ಸಂಘಟನಾ ಕಾರ್ಯದರ್ಶಿ ಅಭಿಷೇಕ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕರು ವರದಿ ವಾಚಿಸಿ, ಶಾಲಾ ಸಹ ಶಿಕ್ಷಕಿ ಶ್ರೀಮತಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ ಧನ್ಯವಾದವನ್ನಿತ್ತರು.

Related posts

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
error: Content is protected !!