ಉಜಿರೆ, : ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಎಸ್‌ಡಿಎಂ ವ್ಯವಹಾರ ನಿರ್ವಹಣಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಪ್ರಸನ್ನಕುಮಾರ ಟಿ ಅವರು ವಾಣಿಜ್ಯ ಕ್ಷೇತ್ರದಲ್ಲಿನ ವಿವಿಧ ಉನ್ನತ ಶಿಕ್ಷಣ ಹಾಗೂ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಪ್ರಮೋದ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಪ್ರಯೋಜನ ಪಡೆದರು.











