ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರಿನಲ್ಲಿ ಮಕ್ಕಳ ಗ್ರಾಮ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಜೆ ಇವರು ಮಕ್ಕಳ ಹಕ್ಕುಗಳ ಬಗ್ಗೆ ಸವಿ ವಿವರವಾಗಿ ಮಾಹಿತಿಯನ್ನು ನೀಡಿದರು . ಶಾಲಾ ಮಕ್ಕಳು ವಿವಿಧ ರೀತಿಯ ಬೇಡಿಕೆಗಳನ್ನು ಮಂಡಿಸಿದರು.

ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಶ್ರೀಮತಿ ವೇದಾವತಿ, ಗಣೇಶ್ ಗೌಡ, ಶಾಂತಿ , ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು, ಸರಕಾರಿ ಪ್ರೌಢ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಳ್ಯೋಡಿಯ ಶಾಲಾ ಮಕ್ಕಳು, ಸಂಜೀವಿನಿ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಧಿತರಿದ್ದರು.
ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪೂರ್ಣಿಮಾ ಜೆ ಸ್ವಾಗತಿಸಿ ಧನ್ಯವಾದವಿತ್ತರು.











