28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಆಯೋಜಿಸಲಾಗುತ್ತಿರುವ 53ನೇ ವರ್ಷದ ವಾರ್ಷಿಕ ಅರ್ಧ ಏಕಾಹ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 31ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯವರು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮ ಕ್ಕೆ ಬರುವಂತೆ ಆಹ್ವಾನಿಸಿದರು. ಈ ಧಾರ್ಮಿಕ ಮಹೋತ್ಸವವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಜ. 13ರಿಂದ 14 ಬುಧವಾರದವರೆಗೆ ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ಜರುಗಲಿದೆ.

53 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಭಜನಾ ಮಂಡಳಿ, ಗ್ರಾಮೀಣ ಭಾಗದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿಕೊಂಡಿದ್ದು, ವಾರ್ಷಿಕ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಭಕ್ತಾದಿಗಳಲ್ಲಿ ಅಪಾರ ಭಕ್ತಿ ಹಾಗೂ ಶ್ರದ್ದೆಗೆ ಪಾತ್ರವಾಗಿರುವುದು ಗಮನಾರ್ಹವಾಗಿದೆ. ಕಾರ್ಯಕ್ರಮದ ಅವಧಿಯಲ್ಲಿ ನಿರಂತರ ಅರ್ಧ ಏಕಾಹ ಭಜನೆ, ವಿಶೇಷ ಪೂಜೆಗಳು, ಧಾರ್ಮಿಕ ವಿಧಿವಿಧಾನಗಳು ಹಾಗೂ ಭಕ್ತಾದಿಗಳ ಸಹಭಾಗಿತ್ವದೊಂದಿಗೆ ವಿವಿಧ ಭಜನಾ ಸೇವೆಗಳು ನಡೆಯಲಿದ್ದು, ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಎಂದು ಆಯೋಜಕರು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಶೀಂಬುಲೂ, ಜಯಕಿರ್ತಿ ಜೈನ್, ಜಿತೇಂದ್ರ ಜೈನ್, ಸಂತೋಷ್ ಜೈನ್, ನಾಗೇಶ್ ಬಿ ನೆರಿಯ, ಶ್ರೀಧರ್ ರಾವ್ ಕಾಯಡ, ಟಾಕಪ್ಪ ಗೌಡ, ಸುರೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಅಕ್ಷತ್ ರೈ, ಗುರುವಪ್ಪ ನಾಯ್, ಹಾಗೂ ಭಜನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!