25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಹೊಸ ವರ್ಷಾಚರಣೆ ವೇಳೆ ದೀಪ ಬೆಳಗಿಸಿ ಹೊಸ ವರ್ಷವನ್ನು ಸ್ವಾಗತಿಸಿ ಮಾತನಾಡುತ್ತಾ, ಜನಸಾಮಾನ್ಯರ ಆರೋಗ್ಯದ ಕಾಳಜಿಯೊಂದಿಗೆ ಹೆಗ್ಗಡೆಯವರು ಪ್ರಾರಂಭಿಸಿದ ಈ ಆಸ್ಪತ್ರೆಯಲ್ಲಿ ಎಲ್ಲಾ ವಿಭಾಗದ ಸಿಬ್ಬಂದಿ ಸಮರ್ಪಣಾ ಭಾವದಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದರಿಂದ ಈ ಆಸ್ಪತ್ರೆ ಜನರ ವಿಶ್ವಾಸಗಳಿಸಲು ಸಾಧ್ಯವಾಯಿತು. ಕೆಲಸ ಮತ್ತು ಸೇವೆಯಲ್ಲಿ ವ್ಯತ್ಯಾಸ ಇದೆ. ಇಲ್ಲಿನ ಸಿಬ್ಬಂದಿ ಸೇವಾಮನೋಭಾವದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದರಿಂದ ರೋಗಿಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಲು ಸಹಕಾರಿಯಾಗಿದೆ ಎಂದರು.

ರೋಗಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ರೋಗ ಬಾರದಂತೆ ತಡೆಯುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಉಚಿತ ಶಿಬಿರಗಳನ್ನು ಆಯೋಜಿಸಿ ಜನರಲ್ಲಿ ಆರೋಗ್ಯದ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದೆ. ಈ ಆಸ್ಪತ್ರೆಯ ಮುಖಾಂತರ ಎಂಆರ್‌ಐ ಸ್ಕಾö್ಯನಿಂಗ್, ನರ್ಸಿಂಗ್ ಕಾಲೇಜ್ ಮುಂತಾದ ಹಲವಾರು ಯೋಜನೆಗಳನ್ನು ಪೂಜ್ಯರು ಹಾಕಿಕೊಂಡಿದ್ದು, ೨೦೨೬ರಲ್ಲಿ ಈ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿದ್ದು, ಬೆಳ್ತಂಗಡಿ ಮತ್ತು ಆಸುಪಾಸಿನ ತಾಲೂಕಿನ ಜನತೆಗೆ ಇನ್ನೂ ಹೆಚ್ಚಿನ ಅತ್ಯಾಧುನಿಕ ವೈದ್ಯಕೀಯ ಸೇವೆ ಇಲ್ಲಿ ದೊರೆಯಲಿದೆ. ಇಲ್ಲಿಗೆ ಬರುವ ರೋಗಿಗಳು ಶೀಘ್ರ ಗುಣಮುಖರಾಗಿ ಆರೋಗ್ಯವಂತ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್.ಪಿ, ನೇತ್ರ ಚಿಕಿತ್ಸಾ ತಜ್ಞರಾದ ಡಾ| ಸುಭಾಶ್ಚಂದ್ರ, ಮೂಳೆ ಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್.ಪಿ, ಡಾ| ಹರೀಶ್ ಬಿ.ಎಸ್, ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ, ಪೆಥಲಾಜಿಸ್ಟ್ ಡಾ| ಮೇಘಾ ಎಂ ಮತ್ತು ಇತರ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿಗಳ ತಂಡ ಹೂವಿನ ಎಸಳುಗಳಿಂದ ರಂಗೋಲಿ ರಚಿಸಿದ್ದರು. ಸ್ಟೋರ್ ಇನ್‌ಚಾರ್ಜ್ ಜಗನ್ನಾಥ ಎಂ ಕಾರ್ಯಕ್ರಮ ನಿರೂಪಿಸಿದರು.

Related posts

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya
error: Content is protected !!