26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದಾರೆ.

ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್‌ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮುಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆಯನ್ನು ಮಾಡಿ ಧನ್ಯತೆಯನ್ನು ಹೊಂದಿದ್ದಾರೆ.

Related posts

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!