March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

ಗುರುವಾಯನಕೆರೆ ವಿದ್ವತ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ಪ್ರಸ್ತುತಿಕರಣ ಕೌಶಲ್ಯ (Presentation Skill), ನವೀನತೆ (Innovation) ಹಾಗೂ ಸೃಜನಶೀಲತೆ (Creativity) ಯನ್ನು ಬೆಳೆಸುವ ಉದ್ದೇಶದಿಂದ ಕಿಚನಾಮಿಕ್ಸ್ 2025 ಕಾರ್ಯಕ್ರಮವನ್ನು ಡಿ. 31 ರಂದು ಕಾಲೇಜಿನಲ್ಲಿ ಸಂಭ್ರಮದಿಂದ ನಡೆಯಿತು.

ಉದ್ಘಾಟನೆಯನ್ನು ಡಾ.ರಿಷಿಕಾ ರೈ, ಚಲನಚಿತ್ರ ನಟಿ ಸಿಂಚನ ಪಿ. ರಾವ್ ಉಜಿರೆ, ಹಾಗೂ ಉಪನ್ಯಾಸಕರಾದ ಪ್ರತಾಪ್ ದೊಡ್ಡಮನೆ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಗೌರವಾನ್ವಿತ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ವಹಿಸಿ ಮಾತನಾಡಿ ವಾಣಿಜ್ಯ ವಿದ್ಯಾರ್ಥಿಗಳು ಪಠ್ಯಧಾರಿತ ಜ್ಞಾನಕ್ಕೆ ಮಾತ್ರ ಸೀಮಿತರಾಗದೇ, ತಮ್ಮ ಆಲೋಚನೆಗಳನ್ನು ಸ್ಪಷ್ಟವಾಗಿ ಮಂಡಿಸುವ ಸಾಮರ್ಥ್ಯ, ಹೊಸತನದ ಚಿಂತನೆ ಮತ್ತು ಸೃಜನಾತ್ಮಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಇ ಮಂಡಗಳಲೆ ಮಾತನಾಡಿ, ಕಿಚನಾಮಿಕ್ಸ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ತಂಡ ಕಾರ್ಯ, ನಿರ್ವಹಣಾ ಕೌಶಲ್ಯ ಹಾಗೂ ಉದ್ಯಮಶೀಲ ಮನೋಭಾವವನ್ನು ಉತ್ತೇಜಿಸುವುದರ ಜೊತೆಗೆ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ರೈ, ಸಂಸ್ಥೆಯ ಕೋಶಾಧಿಕಾರಿ ಕಾಶಿನಾಥ್ ಕಾಂಗಿಣ್ಣಾಯ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ. ಆರ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಮಹಿತಾ , ಎಲ್ಲಾ ಉಪನ್ಯಾಸಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿಯೇ ಇರುವ ಈ ವಿಶೇಷ ಸ್ಪರ್ಧೆಯಲ್ಲಿ ಏಳು ತಂಡಗಳು ಭಾಗವಹಿಸಿ ಅವರ ಆಯ್ಕೆಯ ವಿಶೇಷ ರುಚಿ ತಯಾರಿಸಿ ಅದರಲ್ಲಿ ಉಪಯೋಗಿಸಿರುವ ಹಣ್ಣು, ತರಕಾರಿ, ಸಾಂಬಾರ ಪದಾರ್ಥಗಳ ಮತ್ತು ಔಷಧೀಯ ಗುಣಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ, ತೀರ್ಪುಗಾರರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು.

ನಂತರ ಈ ತಂಡಗಳು ತಯಾರಿಸಿದ ರುಚಿ ರುಚಿಯಾದ ಖಾದ್ಯಗಳ ಮಾರಾಟ ಪ್ರದರ್ಶನ ಆಕರ್ಷಕವಾಗಿತ್ತು ಹಾಗೂ ಹೊಸ ವರ್ಷದ ಸ್ವಾಗತಕ್ಕೆ ತಕ್ಕ ವೇದಿಕೆಯಂತಿತ್ತು.

Related posts

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya
error: Content is protected !!