September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

ಬೆಳ್ತಂಗಡಿ : ‌ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಇಲಾಖಾ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜ.2 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಜನರ ಬಳಿಗೆ ತಾಲೂಕು ಆಡಳಿತ ಎಂಬ ಪರಿಕಲ್ಪನೆಯೊಂದಿಗೆ ಕಳೆದ ಮೂರು ತಿಂಗಳಿಂದ ನಿರಂತರವಾಗಿ ಜನಸ್ಪಂದನ ಸಭೆ ನಡೆದಿದ್ದು ಡಿ.31 ರಂದು ಯಶಸ್ವಿಯಾಗಿ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಪೂರ್ಣಗೊಂಡಿದೆ. ಜನರ ಸಮಸ್ಯೆಗಳಿಗೆ ಕಿವಿಯಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಹರೀಶ್ ಪೂಂಜ ಹೇಳಿದರು.

ತಾಲೂಕಿನ ಯಾವುದೇ ಇಲಾಖಾ ಕಚೇರಿಯಲ್ಲಿ ಅಧಿಕಾರಿಗಳು ಚಲಾವಣದ ಪುಸ್ತಕ ಇಲ್ಲ ಜನರು ಇಲಾಖೆಗೆ ಹೋದರೆ ಅಧಿಕಾರಿಗಳು ಇರುವುದಿಲ್ಲ ಎಂದು ನಾಗರೀಕರು ಹೇಳಿದಾಗ ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ, ತಕ್ಷಣವೇ ಈ ಪದ್ಧತಿಯನ್ನು ಪಾಲಿಸಿ ಅಧಿಕಾರಿಗಳು ಚಲಾವಣವನ್ನು ದಾಖಲಿಸಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಜರಾತಿ ತಂಬ್ ನೀಡಿ ಹೊರಟು ಹೋಗುತ್ತಾರೆ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲು ಹೊರಟು ಹೋಗುತ್ತಿದ್ದಾರೆ ಎಂದು ಸಾರ್ವಜನಿಕರು ಹೇಳಿದಾಗ ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ ಡಿಹೆಚ್ ಓ ಗಮನಕ್ಕೆ ತರಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಮುಖ್ಯಾಧಿಕಾರಿ ರಾಜೇಶ್ ಕೆ., ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮುಗಳಿ ನಾರಾಯಣ ರಾವ್, ಇಲಾಖಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!