37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷರಾದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ತಜ್ಞರಾಗಿ, ಖ್ಯಾತ ಉದ್ಯಮಿಯಾಗಿ, ಕ್ರೀಡಾಪ್ರೇಮಿಯಾಗಿ, ಸಮಾಜಸೇವಕರಾಗಿ, ದಕ್ಷ ಆಡಳಿತದಾರರಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದ ಅವರು ತಮ್ಮ ದಕ್ಷ ನಾಯಕತ್ವದಲ್ಲಿ ತಾವು ಬೆಳೆಯುವುದರೊಂದಿಗೆ ಇತರರಿಗೂ ಪ್ರೋತ್ಸಾಹ ನೀಡಿದ್ದಾರೆ. ಅನೇಕ ಸಮಾರಂಭಗಳಲ್ಲಿ ನಾವು ಜೊತೆಯಾಗಿ ವೇದಿಕೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕ್ಷೇತ್ರದ ಅಪಾರ  ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಸ್ನೇಹಜೀವಿಯಾಗಿ, ಆದರ್ಶ ಸಮಾಜಸೇವಕರಾಗಿ ಚಿರಪರಿಚಿತರಾಗಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು. .

Related posts

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya
error: Content is protected !!