ಉಜಿರೆ: ಬಳಸಿದಷ್ಟು ಮುಗಿಯದ ಅಕ್ಷಯಪಾತ್ರೆ ಶಿಕ್ಷಣ, ಶಾಲಾ ಜೀವನದಲ್ಲಿ ಅದರ ಸದುಪಯೋಗವನ್ನು ಪಡೆದು ಹತ್ತನೇ ತರಗತಿ ಮುಗಿಸಿ ತಮ್ಮ ಮುಂದಿನ ಶೈಕ್ಷಣಿಕ ಜೀವನಕ್ಕೆ ಕಾಲಿಡುತ್ತಿರುವ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಶುಭಮಸ್ತು” ಕಾರ್ಯಕ್ರಮ ಜ.3ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಸಮೂಹ ಗಾಯನ, ಸಮೂಹ ನೃತ್ಯ ಹಾಗೂ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿನೆನಪುಗಳನ್ನು ಹಂಚಿಕೊಂಡರು.
ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ವಿದ್ಯಾರ್ಥಿ ನಿನಾದ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಮೆಲ್ರಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಿಶಾ ವಂದಿಸಿದರು.











