25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆರಾಜು ಅವರು ಜ.3ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಜಯಂತ್. ಟಿ ತಂಡಕ್ಕೆ ವಾದ ಮಂಡಿಸಲು ದೊರೆರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಆವರದಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರನ್ನು ಆರೋಪಿಗಳಾಗಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದು ಇದರ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಜಯಂತ್ ಟಿ ಮಹೇಶ್ ಶೆಟ್ಟಿ ಹಾಗೂ ಇತರರ ಪರವಾಗಿ ವಾದ ಮಂಡಿಸಲು ಇದೀಗ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಗಿದ್ದಾರೆ.

ಈ ಹಿಂದೆ ಎಸ್.ಐ.ಟಿ ಸಲ್ಲಿಸಿದ್ದ ವರದಿಯ ಪ್ರತಿಯನ್ನು ಪಡೆಯಲು ಜಯಂತ್ ಟಿ ಅವರ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದ ದೊರೆ ರಾಜು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ ಎಸ್.ಐ.ಟಿ ವರದಿಯ ಪ್ರತಿಯನ್ನು ಪಡೆದಿದ್ದರು. ಇದೀಗ ಇದರ ಆಧಾರದ ಮೇಲೆ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಲಿದ್ದಾರೆ.

Related posts

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
error: Content is protected !!