32.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಸಂಘ-ಸಂಸ್ಥೆಗಳು

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

ಬೆಳ್ತಂಗಡಿ: ನೊಂದ ಕುಟುಂಬಕ್ಕೆ ,ಕಲಾ ಮನಸ್ಸಿಗೆ ಶಕ್ತಿ ತುಂಬುವ ಸಂಘಟನೆ ಯುವವಾಹಿನಿ ಆಗಿದ್ದು ಇದರ ಸೇವೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇದು ದೇವರ ಸೇವೆ. ಇಂತಹ ಸಂಘಟನೆಗೆ ರಾಜಕೀಯ ನಂಟು ಬರಬಾರದು ಎಂದು ಬಂಗೇರ ಬ್ರಿಗೇಡ್ ನ ಅದ್ಯಕ್ಷೆ ಬಿನುತಾ ಬಂಗೇರ ಹೇಳಿದರು.

ಅವರು ಡಿ. 4ರಂದು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಸಹಕಾರ ದೊಂದಿಗೆ ಘಟಕದ ದಶಸಂಭ್ರಮದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ 8 ತಂಡಗಳ ಬಿಡ್ಡಿಂಗ್ ಮಾದರಿಯ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಫಿ 2026 ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮಾತನಾಡಿದರು.

ನೊಂದ ಕುಟುಂಬದ ಮಕ್ಕಳಿಗೆ ಶಿಕ್ಷಣದ ನೆರವು, ಅನಾರೋಗ್ಯ ಸಂದರ್ಭದ ನೆರವು ನೀಡಬೇಕು ಎಂದರು.ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ಉದ್ಘಾಟಟಿಸಿ ಶುಭ ಹಾರೈಸಿದರು.ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು‌ ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ,ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಮಾತನಾಡಿ ಸಮಾಜಮುಖಿ ಕಾರ್ಯದಲ್ಲಿ ಎಲ್ಲರು ಒಗ್ಗಟ್ಟಾಗಿ ಇರಬೇಕು ಎಂದರು.

ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಆಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾತನಾಡಿ ಶುಭ ಹಾರೈಸಿದರು. ತಾಲೂಕು ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ರಾಜೀವ್ ಸಾಲಿಯಾನ್ ಮುಂಡೂರು, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಿತೀಶ್ ಕೋಟ್ಯಾನ್,ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ ಬೆಳಾಲು,ಮಾತೃಶ್ರೀ ಸಿಲ್ಕ್ ಮಾಲಕ ಮೋಹನ್ ಸುವರ್ಣ,ಶಿಕ್ಷಕಿ ಬೇಬಿಂದ್ರ, ಜಿ.ಪಂ ಮಾಜಿ ಸದಸ್ಯೆ ನಮಿತಾ ತೋಟತ್ತಾಡಿ, ಬೆಳ್ತಂಗಡಿ ಸಂಘದ ನಿರ್ದೇಶಕ ಸಂತೋಷ್ ಕೆಸಿ, ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ವಸಂತ ಪೂಜಾರಿ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಯುವವಾಹಿನಿ ವೇಣೂರು ಘಟಕದ ನಿಕಟ ಪೂರ್ವಾಧ್ಯಕ್ಷ ಶುಭಕರ ಪೂಜಾರಿ ಸಾವ್ಯ, ಉಪ್ಪಿನಂಗಡಿ ಮೆಸ್ಕಾಂ ಸಹಾಯಕ ಇಂಜಿನಿಯರ್ ನಿತಿನ್ ಕೋಟೆ ಮಡಂತ್ಯಾರ್ , ಬೆಳ್ತಂಗಡಿ ಜೇಸಿಐ ಮಂಜುಶ್ರೀ ಅಧ್ಯಕ್ಷ ಜಿತೇಶ್, ಪತ್ರ ಕರ್ತರಾದ ಮನೋಹರ್ ಬಳಂಜ, ಜಾರಪ್ಪ ಪೂಜಾರಿ ಬೆಳಾಲು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಚಂದ್ರಶೇಖರ ಇಂದಬೆಟ್ಟು, ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಉದ್ಯಮಿ ಗಣೇಶ್ ಸಾವ್ಯ,ಯುವ ವಾಹಿನಿ ಮಹಿಳಾ ಸಂಚಾಲನಾ ಸಮಿತಿಯ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ,ಯುವವಾಹಿನಿ ಘಟಕದ ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಅದೇಲು ಉಪಸ್ಥಿತರಿದ್ದರು.

ಬೆಳ್ತಂಗಡಿ ಘಟಕ ಸ್ಥಾಪಕ ಅಧ್ಯಕ್ಷ ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕ ರಾಕೇಶ್ ಮೂಡುಕೋಡಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಘಟಕದ ಮಾಜಿ ಅಧ್ಯಕ್ಷ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ವಂದಿಸಿದರು.ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿಸುತ್ತಿರುವ ಮಾಜಿ ಶಾಸಕ ಕೆ. ವಸಂತ ಬಂಗೇರರ ಪುತ್ರಿ ಬಿನುತಾ ಬಂಗೇರರ ಪರವಾಗಿ ಸುಜಿತಾ ವಿ. ಬಂಗೇರ ಇವರನ್ನು ಗೌರವಿಸಲಾಯಿತು.ದಶ ಸ್ಪಂದನಾ ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ಚಿಕಿತ್ಸೆಗೆ ಸಾಂತ್ವನಾ ನಿಧಿ ಹಸ್ತಾಂತರ ಮಾಡಲಾಯಿತು.ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದು ಸಹಕರಿಸಿದರು.

Related posts

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya
error: Content is protected !!