March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ)ಬೆಳ್ತಂಗಡಿ ತಾಲೂಕು ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೀತಿಯ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಈಗಾಗಲೇ ಪ್ರತಿ ತಿಂಗಳು ಮಾಸಾಸನವನ್ನು ಪಡೆಯುತ್ತಿರುವ ವಾತ್ಸಲ್ಯ ಸದಸ್ಯರಾದ ಬೆಜಕ್ರೆರವರ ವಾತ್ಸಲ್ಯ ಮನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್ ಎಸ್ ರವರು ಹಸ್ತಾಂತರಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬೆಳೆದು ಬಂದ ಹಾದಿ ಭೂಶಕ್ತಿ ಜನಶಕ್ತಿ ಜಲಶಕ್ತಿಯೊಂದಿಗೆ ತಾಲೂಕಿನ ಕೃಷಿಭೂಮಿಯ ಅಭಿವೃದ್ಧಿಯ ಚಿಂತನೆಯನ್ನು ಇಟ್ಟುಕೊಂಡು ಅಂದು ಪೂಜ್ಯರ ಕನಸಿನಂತೆ ಪ್ರಗತಿ- ಬಂದು ಕಾರ್ಯಕ್ರಮಗಳ ಮೂಲಕ ಪ್ರತಿಯೊಬ್ಬರ ಸರ್ವಾಂಗೀಣ ಹಾಗೂ ಗ್ರಾಮದ ಅಭಿವೃದ್ಧಿಗೆ ಯೋಜನೆಯು ಆಧಾರವಾಗಿ ನಿಂತು ಅದೆಷ್ಟೋ ಕುಟುಂಬಗಳ ಬದುಕನ್ನು ಬೆಳಗಿಸಿದೆ, ಒಂದು ಮನೆಯಲ್ಲಿ ಮನೆಯ ಪೂರ್ಣವಾದ ಮೂಲಭೂತ ಸೌಕರ್ಯ ಇಲ್ಲದೆ,ಆ ಮನೆಯಲ್ಲಿ ಜೀವನವನ್ನು ಕಳೆಯುತ್ತಿದ್ದ ಬೇಜಕ್ರೆರವರ ಮನೆಯನ್ನು ಗುರುತಿಸಿ, ಇಂದು ಬೇಜಕ್ರೆರವರಿಗೆ ಸುಂದರವಾದ ಮನೆಯನ್ನು ಯೋಜನೆಯ ವತಿಯಿಂದ ನಿರ್ಮಿಸಿ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ರವರು ಹಸ್ತಾಂತರಿಸಿ ಶುಭ ಹಾರೈಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಯಾಮಣಿ ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ವಾಸಕ್ಕೆ ಮೂಲಭೂತ ವ್ಯವಸ್ಥೆಗಳು ಇಲ್ಲದೆ ಇರುವ ಮನೆಯನ್ನು ಗುರುತಿಸಿ ಆ ಮನೆ ನಿರ್ಮಾಣವನ್ನು ವಾತ್ಸಲ್ಯ ಕಾರ್ಯಕ್ರಮದ ಮೂಲಕ ಮಾಡಿಕೊಡುವಂತಹ ಈ ಒಂದು ಯೋಜನೆ ಬಹಳ ಅರ್ಥಪೂರ್ಣವಾದ ಯೋಜನೆಯಾಗಿದ್ದು ನಮ್ಮ ಊರಿನ ಈ ತಾಯಿಗೆ ಅವಕಾಶ ಒದಗಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿಯ ಮಾಜಿ ಸದಸ್ಯರಾದ ಪ್ರವೀಣ್, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ, ಪ್ರಗತಿ ಬಂದು ಒಕ್ಕೂಟದ ಅಧ್ಯಕ್ಷ ಪ್ರವೀಣ್ ಮಲೆಬೆಟ್ಟು, ಬಜಿಲ ಒಕ್ಕೂಟದ ಅಧ್ಯಕ್ಷರಾದ ಲಿಂಗಪ್ಪ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಯಶವಂತ ಗೌಡ, ಶಾರದ, ವಿಶಾಲಾಕ್ಷಿಯವರು ಉಪಸ್ಥಿತರಿದ್ದರು,ಸ್ಥಳೀಯರಾದ ಬೊಮ್ಮ,ಉಮೇಶ್ ಆಚಾರಿ, ವೆಂಕಣ್ಣ ,ನವೀನ್ ವಾದ್ಯಕೋಡಿ,ದೊಂಬಯ್ಯ ಮೇಸ್ತ್ರಿ,ಮೇಲ್ವಿಚಾರಕರಾದ ಸುಶಾಂತ್, ಸೇವಾಪ್ರತಿನಿಧಿ ಕುಸುಮಾವತಿ ಮತ್ತು ಲೀಲಾರವರು ಉಪಸ್ಥರಿದ್ದರು. ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಯಶೋಧರ್ ರವರು ಸ್ವಾಗತಿಸಿ.ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯಾಧಿಕಾರಿ ಮಧುರಾವಸಂತ್ ಧನ್ಯವಾದ ನೀಡಿದರು.

Related posts

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya
error: Content is protected !!