September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಉಜಿರೆ ಕಾರ್ಯ ಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರು ಅಬಿವೃದ್ದಿ ಹೊಂದುತ್ತಿರುವುದು ಸಂತಸದ ಸಂಗತಿಯಾಗಿದೆ ಮಹಿಳೆಯರು ನಾಲ್ಕುಗೋಡೆಯ ಮದ್ಯದಿಂದ ಹೊರಗೆ ಬಂದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಮಾತೃಶ್ರೀ ಅಮ್ಮನವರ ಜ್ಞಾನವಿಕಾಸ ಕಾರ್ಯಕ್ರಮವು ಪ್ರೇರಣೆ ಎಂದಿಗೆ ಆತ್ಮಸ್ಥೈರ್ಯವನ್ನು ನೀಡಿದೆ ಎಲ್ಲರೂ ಇದರ ಪ್ರಯೋಜನವನ್ನು ಪಡೆಯಿರಿ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಶಾಂತ್ ರವರು ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ ಹಾಗೂ ಇತ್ತೀಚಿನ ದಿನಗಳಲ್ಲಿ ನಡೆಯುವ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ಜ್ಞಾನವಿಕಾಸ ಕೇಂದ್ರದ ಹಿನ್ನೆಲೆ ಮತ್ತು ದೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಜನಜಾಗತಿ ವೇದಿಕೆಯ ತಾಲೂಕು ಸದಸ್ಯರಾದ ಶ್ರೀಮತಿ ಪುಷ್ಪಾವತಿ , ಒಕ್ಕೂಟದ ಅಧ್ಯಕ್ಷೆ ಶೀಲಾವತಿ, ಮೇಲ್ವಿಚಾರಕರಾದ ಶ್ರೀಮತಿ ಪೂರ್ಣಿಮಾ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯೆ ಶ್ರೀಮತಿ ಲೀಲಾವತಿ ವಹಿಸಿದರು. ಕಾರ್ಯಕ್ರಮದಲ್ಲಿ ವಿನುತಾ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ನಿರೂಪಿಸಿ, ಸೌಮ್ಯ ಸ್ವಾಗತಿಸಿ, ಸೇವಾ ಪ್ರತಿನಿಧಿ ಪ್ರೇಮಲತಾ ಧನ್ಯವಾದವಿತ್ತರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!