25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್, ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಹಯಾತುಲ್ ಇಸ್ಲಾಂ ಮದರಸ- ಬೆಳ್ತಂಗಡಿ ಹಾಗೂ ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಸಹಯೋಗದೊಂದಿಗೆ ಮರ್ಹೂಂ ಶಾಝಿನ್ ಸ್ಮರಣಾರ್ಥ ರಕ್ತದಾನ ಶಿಬಿರ ಖಿಲರ್ ಜುಮ್ಮಾ ಮಸೀದಿ ವಠಾರದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ರಕ್ತದಾನ ಶಿಬಿರವನ್ನು ಅಕ್ಬರ್ ಬೆಳ್ತಂಗಡಿ ಉದ್ಘಾಟಿಸಿದರು . ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, ಹಯಾತುಲ್ ಇಸ್ಲಾಂ ಮದರಸ ಅಧ್ಯಕ್ಷ ಬಿ ಶೇಕುಂಞ್ಞ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಇದರ ಪ್ರಧಾನ ಕಾರ್ಯದರ್ಶಿ ಖಾದರ್ ನಾವೂರು ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಖಿಳರ್ ಜುಮ್ಮಾ ಮಸೀದಿ ಖತೀಬರಾದ ಹನೀಫ್ ಫೈಝಿ, ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಖತೀಬರಾದ ಬಶೀರ್ ಸಅದಿ ಕೆಮ್ಮಾರ, ಬೆಳ್ತಂಗಡಿ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಬಿ.ಎ ನಝೀರ್, ಖಿಳರ್ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಗಾಳದ ರಝಾಕ್ ಕೋಡಿಸಭೆ, ಸಲೀಂ ಮುರ, ಹನೀಫ್ ವರ್ಷಾ, ಇಸ್ಮಾಲಿ ಐ.ಬಿ, ಮಹಮ್ಮದ್ ಕುದ್ರಡ್ಕ, ಅಬ್ಬಾಸ್ ಸಂಜಯನಗರ, ರಿಜ್ವಾನ್ ಬಿ.ಕೆ, ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಶೈರೋಝ್ ಉದಯನಗರ ಹಾಗೂ ಊರಿನ ನಾಗರಿಕರು ಇತರರು ಉಪಸ್ಥಿತರಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 53 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಶಬೀರ್ ಸಂಜಯನಗರ ಕಾರ್ಯಕ್ರಮ ನಿರೂಪಿಸಿದರು.

Related posts

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!