25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ‌. 5 ರಂದು ಜೈನ್ ಪೇಟೆ ಕಿನ್ಮಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿಗಳಾದ ಪ್ರೇಮನಾಥ್, ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಕಾರ್ಯಕರ್ತರು ಭಾಗವಹಿಸಿದ್ದರು.

ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಇತ್ತೀಚೆಗೆ ಅಗಲಿದ ವಿನಯ್ ಹೆಗ್ಡೆ ಹಾಗೂ ಮಂಜಪ್ಪ ದೇವಾಡಿಗರ ವ್ಯಕ್ತಿತ್ವದ ಬಗ್ಗೆ ತಿಳಿಸಿ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ನಿವೃತ್ತ ಸರ್ಕಾರಿ ಉದ್ಯೋಗಿಗಳಾದ ಪ್ರಸನ್ನ ಕುಮಾರ್ ಹಾಗೂ ಪದ್ಮ ಕುಮಾರ್ ಅವರನ್ನು ಪಕ್ಷದ ಧ್ವಜ ನೀಡಿ ಸೇರ್ಪಡೆಗೊಳಿಸಲಾಯಿತು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು ವಂದೇ ಮಾತರಂ ಗೀತೆ ಹಾಡಿದರು. ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್ ಸ್ವಾಗತಿಸಿ, ಪ್ರಶಾಂತ್ ಪಾರೆಂಕಿ ವಂದಿಸಿದರು. ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ನಿರೂಪಿಸಿದರು.

Related posts

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya
error: Content is protected !!