September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ 4 ರಂದು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಮಾತನಾಡಿ ಸಂಘಟನೆಯು ಇನ್ನಷ್ಟು ಸಮಾಜ ಸೇವೆಯಲ್ಲಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಇನ್ನಷ್ಟು ಸಂಘಟನೆ ಬಲಪಡಿಸುವಂತೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಎಂ ಪ್ರತಿಮ ನಿಲಯ, ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು ಇದರ ಆಡಳಿತ ಮೊಕ್ತೇಶರರಾದ ಯೋಗೀಶ್ ಪೂಜಾರಿ ಕಡ್ತಿಲ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಮಡಂತ್ಯಾರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯ ಕೆ ಪಾಂಡವರಕಲ್ಲು, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದೀಕ್ಷಿತ್ ಕೋಟೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಪುಷ್ಪವತಿ ಭಂಡಾರದ ಕೋಟ್ಯ ಇವರ ಸೇವೆಯನ್ನು ಮೆಚ್ಚಿ ಸನ್ಮಾನಿಸಲಾಯಿತು . ಸಂಗೀತ ಹಾಗೂ ಭರತನಾಟ್ಯ ದಲ್ಲಿ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಇವರನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೋರಂಜನ ಕಾರ್ಯಕ್ರಮ ಹಾಗೂ ವಿಠಲ ನಾಯಕ್ ಕಲ್ಲಡ್ಕ ಇವರಿಂದ ತುಳು ಹಾಸ್ಯ ಸಂಭ್ರಮ ನಡೆಯಿತು. ಸಂಘದ ಕಾರ್ಯದರ್ಶಿಯಾದ ನವೀನ್ ಪಡೀಲ್ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
✍️ ಹರ್ಷ ಬಳ್ಳಮಂಜ

Related posts

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya
error: Content is protected !!