ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅತೀ ಹೆಚ್ಚು ಕ್ರಿಶ್ಚಿಯನ್ ಮತದಾರರನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರ ಗೆಲುವಿನ ಹಿಂದೆ ಜಿಲ್ಲಾ ಪ್ರಭಾರಿ ಆಗಿ ಜವಾಬ್ದಾರಿ ತೆಗೆದುಕೊಂಡು ಆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಪಕ್ಷದ ಅಭ್ಯರ್ಥಿಯನ್ನು ಗೆಲುವಿನ ದಡ ಸೇರಿಸಿದ ಚಾಣಕ್ಯ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ , ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸ ರವರನ್ನು ಇಂದು ನಡೆದ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಂಸದರು ಮತ್ತು ಶಾಸಕರು ಶ್ಲಾಘಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಮಂಡಲದ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.











