September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನ ಪಿಲಿಕುಳದ ಸ್ಕೌಟ್ ಗೈಡ್ ಭವನದಲ್ಲಿ ಜ. 3 ಮತ್ತು 4ರಂದು ನಡೆದ ಭಾರತೀಯ ಜೈನ್ ಮಿಲನ್ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ತೃತೀಯ ಸ್ಥಾನ ಪಡೆದಿರುತ್ತಾರೆ. ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಅನಿಕ ಜೈನ್ ಹಾಗೂ ಶುಕ್ತಿ ಜೈನ್ ಭಾಗವಹಿಸಿರುತ್ತಾರೆ.

ಉಜಿರೆಯ ತೃಪ್ತ ಕುಮಾರ್ ಜೈನ್ ಸಂಯೋಜಿಸಿದ ವಿಜೇತ ಜಿನಭಜನಾ ತಂಡಗಳಿಗೆ ಸೋನಿಯಾ ಯಶೋವರ್ಮ ರವರು ಮಾರ್ಗದರ್ಶನ ನೀಡಿ, ಅಭಿನಂದಿಸಿರುತ್ತಾರೆ.

ಶಾಲೆಯ ವತಿಯಿಂದ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya
error: Content is protected !!