23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿರುವ ಆದೇಶವನ್ನು ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಅರ್ಜಿಯಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ, ಬೆಳ್ತಂಗಡಿ ಪೊಲೀಸ್ ‘ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

1 ವರ್ಷದ ಅವಧಿಗೆ ತಿಮರೋಡಿ ಅವರನ್ನು ಗಡೀಪಾರು ಮಾಡಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಪುತ್ತೂರು ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ತಾಂತ್ರಿಕ ಹಾಗೂ ಕಾನೂನು ಪ್ರಕ್ರಿಯೆಗಳ ಪಾಲನೆ ಮಾಡದ ಕಾರಣ ಗಡಿಪಾರು ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಹೊಸದಾಗಿ ಆದೇಶ ಹೊರಡಿಸಬಹುದು ಎಂದು ಹೇಳಿತ್ತು. ಅದರಂತೆ, ಹೊಸದಾಗಿ ಗಡೀಪಾರು ಆದೇಶ ಹೊರಡಿಸಲಾಗಿದೆ. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!