September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

ಬೆಳ್ತಂಗಡಿ : ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ನಿಡ್ಲೆ ಉಪ ಆರೋಗ್ಯ ಕೇಂದ್ರವು ತನ್ನ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಲೆ ಆಯುಷ್ಮಾನ್ ಆರೋಗ್ಯ ಕೇಂದ್ರವು ವೈದ್ಯರು ಮತ್ತು ಸಿಬ್ಬಂದಿ ವರ್ಗದ ಉತ್ತಮ ಗುಣಮಟ್ಟದ ಸೇವಾ ಸಾಧನೆಗಾಗಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗುವ ಮೂಲಕ
ಇಲಾಖಾ ಮಟ್ಟದಲ್ಲಿ ವ್ಯಾಪಕ ಅಭಿನಂದನೆಗೆ ಪಾತ್ರವಾಗಿದೆ.

ನಿಡ್ಲೆ ಆಯುಷ್ಮಾನ್ ಆರೋಗ್ಯ ಕೇಂದ್ರವು 2001ರಲ್ಲಿ ಪ್ರಾರಂಭಗೊಂಡಿದ್ದು 2021ರಲ್ಲಿ ಮೇಲ್ದರ್ಜೆಗೇರಿ ಸಮುದಾಯ ಆರೋಗ್ಯಾಧಿಕಾರಿ ಹುದ್ದೆ ನೇಮಕಗೊಂಡಿತ್ತು.
ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ತುಷಾರ ಕುಮಾರಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದೀಗ ನಿಡ್ಲೆ ಆಯುಷ್ಮಾನ್ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ವಿನುತಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸುಜಾತ, ಆಶಾ ಕಾರ್ಯಕರ್ತೆಯರಾದ ಯುಮುನಾ, ಸುನೀತಾ, ಚಂದ್ರಾವತಿ‌ ಇವರು ವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಈ ಭಾಗದ ಜನರು ಎಲ್ಲಾ ಪ್ರಾಥಮಿಕ ಸೇವೆಗಳನ್ನು ಪಡೆಯುತ್ತಿದ್ದಾರೆ.

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya
error: Content is protected !!