September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

ಉಜಿರೆ: ಪ್ರಯಾಣದಲ್ಲಿ, ವಾಹನಗಳಲ್ಲಿ ಸಂಚರಿಸುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಪಘಾತವಾದಾಗ ಸಾರ್ವಜನಿಕರು ತಕ್ಷಣ ಸ್ಪಂದಿಸಿ ಸೂಕ್ತ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಅರಿವು, ಜಾಗೃತಿ ಹೊಂದಿರಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಹೇಳಿದರು.

ಅವರು ಜ 2ರಂದು ಉಜಿರೆ ಅರಳಿಯಲ್ಲಿರುವ ರೋಟರಿ ಸಭಾಭವನದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮತ್ತು ಬೆಳ್ತಂಗಡಿ ರೋಟರಿಕ್ಲಬ್ ಆಶ್ರಯದಲ್ಲಿ ಪೊಲೀಸ್ ಇಲಾಖೆ, ಅಂಗನವಾಡಿ ಕಾರ್ಯಕರ್ತರು ಮತ್ತು ಜೂನಿಯರ್ ರೆಡ್‌ಕ್ರಾಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಗಳೂರಿನ ರೆಡ್‌ಕ್ರಾಸ್ ಶತಮಾನೋತ್ಸವ ಸ್ಮಾರಕ ಕಟ್ಟಡ ಪೂರ್ಣಗೊಂಡಿದ್ದು ಅಲ್ಲಿ ಮುಂದೆ ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಬಂಟ್ವಾಳದಲ್ಲಿ ಸದ್ಯದಲ್ಲೆ ಹೊಸ ರೆಡ್‌ಕ್ರಾಸ್ ಘಟಕ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ರೆಡ್‌ಕ್ರಾಸ್ ವಿದ್ಯಾರ್ಥಿಗಳು ಸಾದರಪಡಿಸಿದ ಸ್ಕಿಟ್ ವಿಶೇಷ ಪ್ರಶಂಸೆಗೆ ಪಾತ್ರವಾಯಿತು.

ಇಂಡಿಯನ್ ರೆಡ್‌ಕ್ರಾಸ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಹರಿದಾಸ ಮಾತನಾಡಿ, ಮಾನವೀಯತೆಯ ನೆಲೆಯಲ್ಲಿ ರೆಡ್‌ಕ್ರಾಸ್ ಸೇವೆ ಮಾಡುತ್ತದೆ ಎಂದು ಹೇಳಿದರು.

ಗುರುದತ್ ಎಂ. ನಾಯಕ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪಿ. ಪ್ರಕಾಶ್ ಪ್ರಭು ಮತ್ತು ಕಾರ್ಯದರ್ಶಿ ಡಾ. ಎಂ.ಎಂ ದಯಾಕರ್ ಉಪಸ್ಥಿತರಿದ್ದರು.

ಸಚೇತ್ ಸುವರ್ಣ ಮತ್ತು ನಿತ್ಯಶ್ರೀ ಬಿ.ವಿ. ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ಕಾರ್ಯಕ್ರಮ ನಡೆಸಿದರು. ಯಶವಂತ ಪಟವರ್ಧನ್ ಸ್ವಾಗತಿಸಿದರು. ಪ್ರಮೋದ್ ಆರ್. ನಾಯಕ್ ಧನ್ಯವಾದವಿತ್ತರು.

Related posts

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!