25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

ಬೆಳ್ತಂಗಡಿ: ಐದು ದಶಕಗಳಿಂದ ರಾಜಕೀಯ ಜೀವನದಲ್ಲಿ ಜನಸೇವೆ ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡ ಮಾಜಿ ಶಾಸಕರಾದ ದಿ.ಕೆ ವಸಂತ ಬಂಗೇರ ಅವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ 65 ಕೆಜಿ ವಿಭಾಗದ ಪುರುಷರ ಅಂತರ್ ಜಿಲ್ಲಾ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಪ್ರೌಢಾಶಾಲಾ ವಿಭಾಗದ ಬಾಲಕ ಬಾಲಕಿಯರ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಜ.15 ರಂದು ಬಂಡಿಮಠ ಮೈದಾನ ಮದ್ದಡ್ಕದಲ್ಲಿ ಆಯೋಜಿಸಲಾಗಿದೆ ಎಂದು ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ಹೇಳಿದರು.

ಅವರು ಜ 6ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇಗಾಗಲೇ ಕಬಡ್ಡಿಯ ಯಶಸ್ವಿಗೆ ಪೂರ್ವ ಸಿದ್ದತೆಗಳು ಭರದಿಂದ ಸಾಗುತ್ತಿದೆ.ಕಳೆದ ವರ್ಷ ಜಿಲ್ಲಾ ಮಟ್ಟದ ಪಂದ್ಯಾವಳಿ ಆಯೋಜಿಸಿದ್ದು ಈ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಕೂಟ ಆಯೋಜಿಸಲಾಗುತ್ತಿದೆ ಎಂದರು.

ಪುರುಷರ ಮುಕ್ತ ವಿಭಾಗ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ವಿಭಾಗದಲ್ಲಿ ವಿಜೇತ ತಂಡಗಳಿಗೆ
ನಗದು& ಟ್ರೋಫಿ ಸಿಗಲಿದೆ.ಬೆಸ್ಟ್ ರೈಡರ್, ಬೆಸ್ಟ್ ಕ್ಯಾಚರ್, ಆಲ್ ರೌಂಡರ್ ಹಾಗೂ ಶಿಸ್ತಿನ ತಂಡಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಟೂರ್ನಿಯಲ್ಲಿ ಭಾಗವಹಿಸಿದ ಪ್ರತಿಯೊಂದು ಹೈಸ್ಕೂಲಿನ ತಂಡಗಳಿಗೆ ಶಾಶ್ವತ ಫಲಕ ಮತ್ತು ಸೆಮಿಫೈನಲ್ ತಲುಪಿದ ತಂಡಗಳ ಸದಸ್ಯರಿಗೆ ಪ್ರಶಸ್ತಿ ಪತ್ರ ನೀಡಲಾಗುತ್ತದೆ.ಬೆಳಿಗ್ಗೆಯಿಂದ ಮರುದಿನ ಬೆಳಿಗ್ಗೆಯವರೆಗೆ ವಿವಿಧ ವಿಭಾಗದಲ್ಲಿ ಕಬಡ್ಡಿ ಪಂದ್ಯಾವಳಿಯು ನಡೆಯಲಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿ.ಕೆ ವಸಂತ ಬಂಗೇರರವರ ಧರ್ಮಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ,ಆರಿಕೋಡಿ ಧರ್ಮದರ್ಶಿ ಹರೀಶ್ ,ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಸಂಸ್ಥೆ ರಾಕೇಶ್ ಮಲ್ಲಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಂಗೇರ ಬ್ರಿಗೇಡ್ ನ ಉಪಾಧ್ಯಕ್ಷ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಸಲೀಂ ಗುರುವಾಯನಕೆರೆ,ಕೋಶಾಧಿಕಾರಿ ರಾಜಶ್ರೀ ರಮಣ್, ಜೊತೆ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya
error: Content is protected !!