September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

ಧರ್ಮಸ್ಥಳ : ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ (ಎಸ್.ಎಮ್.ಎಲ್) ಕಂಪೆನಿಯ ಬಸ್ಸು ದೇಣಿಗೆ ನೀಡಲಾಯಿತು. ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ , ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆಯವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

ಹಸ್ತಾಂತರದ ಬಳಿಕ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಸ್ಸನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಸಮ್ಮುಖದಲ್ಲಿ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ನೀಡಿದರು. ಕಾಲೇಜಿನ ಉಪ ಪ್ರಾಚಾರ್ಯ ರಾಜೇಶ್ ಬಿ. ಬಸ್ಸಿನ ಕೀ ಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಹೆಗ್ಗಡೆಯವರು ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ರವರಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದರು. ಈ ವೇಳೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಕರ್ಣಾಟಕ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ( ಐಆರ್) ಶ್ರೀನಿವಾಸ್ ಮೂರ್ತಿ ಎಮ್, ಪುತ್ತೂರು ವಿಭಾಗದ ಕ್ಲಸ್ಟರ್ ಹೆಡ್ ಮತ್ತು ಮುಖ್ಯ ವ್ಯವಸ್ಥಾಪಕ ಶ್ರೀ ಹರಿ, ಉಜಿರೆ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ರಾಮಕೃಷ್ಣ ವಿ. ಯು , ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಹಣಕಾಸು ಅಧಿಕಾರಿ ಅರವಿಂದ ಭಗವತ್ ಪಿ, ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ಉಪಸ್ಥಿತರಿದ್ದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya
error: Content is protected !!