23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಗೇರುಕಟ್ಟೆ: ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.24 ರಿಂದ 30ರವರಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ವೈದಿಕ, ವಿಧಿ ವಿಧಾನಗಳೊಂದಿಗೆ ವ್ಯವಸ್ಥಾಪನಾ ಸಮಿತಿ, ಭಕ್ತ ವೃಂದದವರು ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಹರೀಶ್ ಕುಮಾ‌ರ್, ಸದಸ್ಯರಾದ ಹರೀಶ್ ಗೌಡ ಕೆ, ನೀನಾ ಕುಮಾರ್, ಅರುಣ್ ಶೆಟ್ಟಿ, ಮೋಹಿನಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಮೆದಿನ, ಕಳಿಯ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ., ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಡಾ. ಅನಂತ ಭಟ್, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ಅಂಭಾ ಬಿ. ಆಳ್ವ, ದಿನೇಶ್ ಗೌಡ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ ನಾಳ, ಶ್ರೀ ದುರ್ಗಾ ಮಾತೃ ಮಂಡಳಿ ಕಾರ್ಯದರ್ಶಿ ವಿನೋದ, ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಹೆಚ್., ಪ್ರಮುಖ ರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಟಿ, ವಿಜಯ ಗೌಡ ಕೆ, ಸುಧಾಕರ ಮಜಲು,ಸತೀಶ್ ಭಂಡಾರಿ ನಾಳ, ಮಹಾಲಕ್ಷ್ಮಿ, ವಿಕ್ರಮ್ ಜೆ. ಎನ್., ಜಗನ್ನಾಥ ವಂಜಾರೆ, ಗೋಪಾಲ ಮುದ್ದುಂಜ, ಸತೀಶ್ ಶೆಟ್ಟಿ, ಸದಾಶಿವ ಗಾಣಿಗ, ಕೆ. ಎನ್. ಗೌಡ, ಸೋಮಣ್ಣ ಗೌಡ, ಮೋಹನ ಗೌಡ, ಗಿರೀಶ್ ಶೆಟ್ಟಿ, ಪ್ರಮೀಳಾ, ಜಾತ್ರಾ ಮಹೋತ್ಸವದ ವಿವಿಧ ಉಪ ಸಮಿತಿ ಪದಾಧಿಕಾರಿಗಳು ಸದಸ್ಯರು, ಅರ್ಚಕ ವೃಂದ, ದೇವಸ್ಥಾನದ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಯ ಸದಸ್ಯರು, ಊರ ಪರವೂರ ಭಕ್ತರು ಹಾಜರಿದ್ದರು.

Related posts

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya
error: Content is protected !!