March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

ಉಜಿರೆ: ‘ಭಾರತ್‌ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕೃತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾನ ಹೊಂದಿರುವ ಡಾ. ಡಿ.ಕೆ ಹರಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದರು.

ಭೇಟಿ ಬಳಿಕ ವಿವಿಧ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಗ್ಗಡೆಯವರು ಸಮಾಜದ ಬಗ್ಗೆ ಅತ್ಯಂತ ಕಾಳಜಿ ಹೊಂದಿರುವ ಕಾರಣವೇ ಗ್ರಾಮೀಣ ಭಾಗದಲ್ಲಿ ಇಂತಹ ಆಸ್ಪತ್ರೆಯ ಮೂಲಕ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡಲಾಗುತ್ತಿದೆ ಎಂದರು. ಹೈಟೆಕ್ ಸೌಲಭ್ಯವಿರುವ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಸೇವೆ, ಆಸ್ಪತ್ರೆಯ ಶುಚಿತ್ವ, ಇಲ್ಲಿರುವ ಮೂಲಭೂತ ಸೌಲಭ್ಯಗಳು ಮತ್ತು ಲಭ್ಯವಿರುವ ವೈದ್ಯಕೀಯ ಸೇವೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಡಾ. ಡಿ.ಕೆ ಹರಿ ದಂಪತಿಗಳನ್ನು ಸ್ವಾಗತಿಸಿ ಬರಮಾಡಿಕೊಂಡರು. ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya
error: Content is protected !!