24.8 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

ಉಜಿರೆ : ಹರಿಯಾಣ ರಾಜ್ಯದ ರಾಣಿ ಪತ್ನಲ್ಲಿ ನಡೆಯಲಿರುವ ಎಸ್‌ಜಿಎಫ್‌ಐ (SGFI) ವಯೋಮಿತಿ – 19 ಬಾಲಕರ ವಿಭಾಗದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ತಂಡವು ಆಯ್ಕೆಯಾಗಿದ್ದು, ಪಾಲ್ಗೊಳ್ಳಲಿರುವ ಕರ್ನಾಟಕ ರಾಜ್ಯ ಕಬಡ್ಡಿ ಕ್ರೀಡಾ ಪಟುಗಳ ತಂಡ ಈಗಾಗಲೇ ಸಜ್ಜಾಗಿದೆ.

ಈ ಬಾರಿ ಕರ್ನಾಟಕ ತಂಡವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರತಿನಿಧಿಸಲಿದ್ದು, ಈಗಾಗಲೇ ತಂಡಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾವಂತ ಕ್ರೀಡಾ ಪಟುಗಳನ್ನು ಆಯ್ಕೆಮಾಡಿಕೊಳ್ಳಲಾಗಿದೆ. ಒಟ್ಟು 12 ವಿದ್ಯಾರ್ಥಿಗಳನ್ನು ಒಳಗೊಂಡಿರುವ ರಾಜ್ಯ ತಂಡವು, ಈವರೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ 10ದಿನಗಳ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿತ್ತು.

ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡವು ಇತ್ತೀಚೆಗೆ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದಲ್ಲಿ ಚಾಂಪಿಯನ್ ಗಳಾಗಿ ಹೊರಹೊಮ್ಮಿ, ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದುಕೊಂಡಿತ್ತು. ಇದೇ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ತಂಡಕ್ಕೆ ಮೆಚ್ಚುಗೆಯನ್ನು ‌ವ್ಯಕ್ತಪಡಿಸಿ, ಶುಭ ಹಾರೈಸಿದ್ದರು.

ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿರುವ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ. ಪೂಂಜ ಶುಭ ಹಾರೈಸಿದ್ದಾರೆ.

ವಿವಿಧ ಜಿಲ್ಲೆಗಳ ಕ್ರೀಡಾ ಪಟುಗಳು ರಾಜ್ಯ ತಂಡಕ್ಕೆ ಆಯ್ಕೆ :

ರಾಜ್ಯದಿಂದ ತೆರಳುತ್ತಿರುವ ಕಬಡ್ಡಿ ತಂಡದಲ್ಲಿ ಧಾರವಾಡ, ಚಿಕ್ಕೋಡಿ, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿಭಾನ್ವಿತ ಕ್ರೀಡಾ ಪಟುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ತಂಡದ ನಾಯಕತ್ವವನ್ನು ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸತ್ಯ ನಾಯಕ್ ವಹಿಸಿಕೊಂಡಿದ್ದು, ವಿದ್ಯಾರ್ಥಿಗಳಾದ ಆಶಿಶ್, ಆಶಿಕ್, ಕಾರ್ತಿಕ್, ಆನಂದ್, ವಿಪುಲ್ ಶೆಟ್ಟಿ, ಸಂದೀಪ್, ವಿವೇಕಾನಂದ, ಅನಿಲ್, ಸಹೀಮ್, ಪ್ರಶಾಂತ್, ಮಾತು ಮತ್ತು ಆದರ್ಶ್ ತಂಡದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ತಂಡಕ್ಕೆ ಹಿರಿಯ ಕಬಡ್ಡಿ ತರಬೇತುದಾರ ಕೃಷ್ಣಾನಂದರಾವ್ ತರಬೇತಿಯನ್ನು ನೀಡಿರುತ್ತಾರೆ. ತಂಡದ ವ್ಯವಸ್ಥಾಪಕರಾಗಿ ವಿಜಯಪುರದ ರಮೇಶ್ ಆಯ್ಕೆಗೊಂಡಿರುತ್ತಾರೆ.

Related posts

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya
error: Content is protected !!