September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಸರ್ವೇ ನಂ.130/2ರಲ್ಲಿ 0.85 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಕಾಲೇಜಿಗೆ ಸಂಬಂಧಿಸಿದ ಕಟ್ಟಡವೊಂದರ ನಿರ್ಮಾಣಕ್ಕೆ ಸಂಬಂಧಿಸಿದ ಪರವಾನಗಿ ಪ್ರಕ್ರಿಯೆ ಪೂರ್ಣಗೊಳಿಸಿ,ಅನುಮತಿ ಪಡೆದುಕೊಂಡ ನಂತರ ಕಾಮಗಾರಿ ಮುಂದುವರಿಸುವುದಾಗಿ ಗುರುವಾಯನಕೆರೆಯ ವಿದ್ವತ್ ಕಾಲೇಜಿನ ಸ್ಥಾಪಕರಾದ ಸುಭಾಶ್ಚಂದ್ರ ಶೆಟ್ಟಿಯವರು ಕುವೆಟ್ಟು ಪಂಚಾಯತ್ ಅಧಿಕಾರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಜ.5 ಮತ್ತು 7ರಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕ‌ರ್ ಅವರು ವಿದ್ವತ್ ಕಾಲೇಜಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದ ವೇಳೆ, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಅಗತ್ಯ ಅನುಮೋದನೆಗಳನ್ನು ಪಡೆದುಕೊಂಡು ಕಾಮಗಾರಿ ಮುಂದುವರೆಸಿ ಎಂದು ಕಾಲೇಜು ಆಡಳಿತ ಮಂಡಳಿಗೆ ನಿರ್ದೇಶನ ನೀಡಿದ್ದರು.

ಜ.6ರಂದು ಕುವೆಟ್ಟು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಇಮ್ತಿಯಾಸ್ ಅವರು ತಿಳುವಳಿಕೆ ಪತ್ರವೊಂದನ್ನು ಕಾಲೇಜಿಗೆ ನೀಡಿ, ಕಾಮಗಾರಿಗೆ ತಡೆ ನೀಡಿ ಎಂದು ಸೂಚಿಸಿದ್ದರು.

ಈ ತಿಳುವಳಿಕೆ ಪತ್ರಕ್ಕೆ ಜ.7ರಂದು ಪತ್ರದ ಮೂಲಕ ಪ್ರತಿಕ್ರಿಯೆ ಸಲ್ಲಿಸಿರುವ ವಿದ್ವತ್ ಕಾಲೇಜಿನ ಸ್ಥಾಪಕರಾದ ಸುಭಾಶ್ಚಂದ್ರ ಶೆಟ್ಟಿಯವರು, ತಿಳುವಳಿಕೆ ಪತ್ರ ಮುಖೇನ ನೀಡಿರುವ ಸೂಚನೆಗಳನ್ನು ಗೌರವಪೂರಕವಾಗಿ ಅಂಗೀಕರಿಸಲಾಗುವುದು. ಕಟ್ಟಡ ನಿರ್ಮಾಣದ ಪರವಾನಗಿ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಸಲ್ಲಿಸಿದ್ದು, ಅಧಿಕೃತ ಅನುಮತಿ ದೊರಕುವವರೆಗೆ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ನಿಯಮಾನುಸಾರ ಅಗತ್ಯ ಅನುಮತಿಗಳನ್ನು ಪಡೆದುಕೊಂಡು ಕಾಮಗಾರಿ ಮರು ಪ್ರಾರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ: ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya
error: Content is protected !!